ಬೀದರ್: ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಪ್ರಕರಣ; ಇಬ್ಬರ ಬಂಧನ

Update: 2024-12-18 04:27 GMT

ಬೀದರ್: ಜನವಾಡಾ ಪೊಲೀಸ್ ಠಾಣೆಯ ವ್ಯಾಪ್ತಿಯ ವಿಳಾಸಪುರ್ ಗ್ರಾಮದಲ್ಲಿ ನಡೆದ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಪ್ರಕರಣದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ವಿಳಾಸಪುರದ ಅವಿನಾಶ್ ಉಪ್ಪಾರ್ ಮತ್ತು ದಿಗಂಬರ್ ಪಾಟೀಲ್ ಬಂಧಿತ ಆರೋಪಿಗಳು. ಮಂಗಳವಾರ ಬೆಳಗ್ಗೆ ಬೀದರ ನಗರದ ನೌಬಾದ್ ಬಸವೇಶ್ವರ್ ವೃತ್ತದ ಹತ್ತಿರ ಆರೋಪಿಗಳನ್ನು ಬಂಧಿಸಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದಿ. 12 ರ ರಾತ್ರಿ ವಿಳಾಸಪುರ್ ಗ್ರಾಮದಲ್ಲಿನ ಅಂಬೇಡ್ಕರ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಲಾಗಿತ್ತು. ಈ ಘಟನೆ ದಿ. 13 ರಂದು ಬೆಳಕಿಗೆ ಬಂದಿತ್ತು. ಈ ಘಟನೆಯನ್ನು ಖಂಡಿಸಿ ಗ್ರಾಮದ ನಿವಾಸಿಯಾದ ಕಬೀರದಾಸ್ ಮೇತ್ರೆ ಅವರು ಪ್ರಕರಣ ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳನ್ನು ಬಂಧಿಸುವಾಗ ಪಿಎಸ್ಐ ಹುಲೆಪ್ಪ ಗೌಡಗೊಂಡ್, ಎಎಸ್ಐ ವಿಜಯಕುಮಾರ್ ಮತ್ತು ಸಿಬ್ಬಂದಿ ಶಿವಶಂಕರ್ ಇದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News