ಬೀದರ್ | ಬೈಕ್ ಗಳ ನಡುವೆ ಡಿಕ್ಕಿ : ಓರ್ವ ಮೃತ್ಯು, ಮೂವರಿಗೆ ಗಾಯ
Update: 2024-12-26 10:16 GMT
ಬೀದರ್ : ಬೈಕ್ ಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದು, ಮೂವರಿಗೆ ಗಾಯವಾದ ಘಟನೆ ಭಾಲ್ಕಿ ತಾಲ್ಲೂಕಿನ ಬಸವನಗರ ಗ್ರಾಮದ ಹತ್ತಿರ ಸಂಭವಿಸಿದೆ.
ದಾಡಗಿ ಗ್ರಾಮದ ಮಹಾದೇವ್ ಬಿರಾದಾರ್ (25) ಮೃತ ಯುವಕ ಎಂದು ತಿಳಿದುಬಂದಿದೆ.
ನಿನ್ನೆ ರಾತ್ರಿ ಮಹಾದೇವ್ ಬಿರಾದಾರ್ ಭಾಲ್ಕಿಯಿಂದ ದಾಡಗಿ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಹಾದೇವನನ್ನು ಭಾಲ್ಕಿಯ ಸರಕಾರಿ ಆಸ್ಪತ್ರೆಗೆ ಕರೆದೋಯ್ದು ಹೆಚ್ಚಿನ ಚಿಕಿತ್ಸೆಗಾಗಿ ಬೀದರ್ ನ ಗುರುನಾನಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಇನ್ನು ಉಳಿದ ಮೂವರಿಗೆ ಗಾಯಗಳಾಗಿದ್ದು, ಭಾಲ್ಕಿಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಭಾಲ್ಕಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.