ಬೀದರ್ | ಮೇಲ್ಜಾತಿಯ ಬಾಲಕಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ ಆರೋಪ : ಯುವಕ ಮೃತ್ಯು

Update: 2025-01-08 11:45 GMT

ಸುಮಿತ್ ಮೃತಪಟ್ಟ ಯುವಕ

ಬೀದರ್ : ಮೇಲ್ಜಾತಿ ಬಾಲಕಿಯನ್ನು ಪ್ರೀತಿ ಮಾಡಿದ್ದಕ್ಕಾಗಿ ದಲಿತ ಯುವಕನಿಗೆ ಹಲ್ಲೆ ನಡೆಸಿದ ಪರಿಣಾಮ ಯುವಕ ಸಾವನಪ್ಪಿದ ಘಟನೆ ಔರಾದ್ ತಾಲ್ಲೂಕಿನ ಠಾಣಾ ಕುಶನೂರ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಬೇಡಕುಂದಾ ಗ್ರಾಮದ ನಿವಾಸಿ ಸುಮಿತ್ (19) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ.

ರಕ್ಷಾಳ್ ಗ್ರಾಮದ ಬಾಲಕಿಯನ್ನು ಸುಮಿತ್ ಪ್ರೀತಿಸುತಿದ್ದ. ರವಿವಾರದಂದು ನಮ್ಮ ಮನೆ ಕಡೆಗೆ ಬಾ ಎಂದು ಸುಮಿತ್ ನನ್ನು ಹುಡುಗಿ ಕರೆದಿದ್ದಳು. ಹುಡುಗಿಯನ್ನು ಭೇಟಿ ಮಾಡಲು ಹೋದ ಸುಮಿತ್ ನನ್ನು, ಹುಡುಗಿಯ ಅಪ್ಪ, ಅಣ್ಣ ಮತ್ತು ಸಂಬಂಧಿಕರು ಮನೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದರು. ಸುಮಿತ್ ಮನೆಯಿಂದ ಹೊರಗಡೆ ಹೋದ ನಂತರ ಬಾಲಕಿಯ ಅಣ್ಣ ಮತ್ತು ಆತನ ಗೆಳೆಯರು ಸೇರಿಕೊಂಡು ಮತ್ತೆ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಸುಮಿತ್ ನ ಮನೆಗೆ ಕರೆ ಮಾಡಿ ಆತನನ್ನು ಕರೆದೋಯ್ಯಲು ಹೇಳಿದ್ದಾರೆ ಎಂದು ಮೃತ ಯುವಕನ ಸಂಬಂಧಿಕರು ತಿಳಿಸಿದ್ದಾರೆ.

ಸುಮಿತ್ ನ ತಂದೆ ಹಾಗೂ ಸಹೋದರರು ಘಟನೆ ನಡೆದ ಸ್ಥಳಕ್ಕೆ ಬಂದು, ಸುಮಿತ್ ನನ್ನು ತಕ್ಷಣವೇ ಠಾಣಾ ಕುಶನೂರ್ ಸರಕಾರಿ ಆಸ್ಪತ್ರೆಗೆ ಕರೆದೋಯ್ದಿದ್ದಾರೆ. ಅಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡು ಮಹಾರಾಷ್ಟ್ರದ ಉದಗೀರ್ ಲಾತೂರ್ ಆಸ್ಪತ್ರೆಗೆ ಕರೆದೋಯ್ದು ಚಿಕಿತ್ಸೆ ನೀಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸುಮಿತ್ ಮೃತಪಟ್ಟಿದ್ದಾನೆ. ಇಂದು ಬೀದರ್ ಆಸ್ಪತ್ರೆಗೆ ಮೃತದೇಹ ತಂದಿದ್ದೇವೆ ಎಂದು ಮೃತ ಯುವಕನ ಸಂಬಂಧಿಕರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಠಾಣಾ ಕುಶನೂರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News