ಬೀದರ್ | ಔರಾದ್ ತಾಲ್ಲೂಕಿನ ಹಳ್ಳಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹ
Update: 2024-12-12 15:25 GMT
ಬೀದರ್ : ಔರಾದ್ ತಾಲ್ಲೂಕಿನ ಹಳ್ಳಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಆಗ್ರಹಿಸಿದೆ.
ತಾಲ್ಲೂಕಿನ ಬಸ್ ಡಿಪೋ ಎದುರುಗಡೆ ಪ್ರತಿಭಟನೆಯಲ್ಲಿ ಎಬಿವಿಪಿ ಜಿಲ್ಲಾ ಸಂಚಾಲಕ ಶಶಿಕಾಂತ್ ಯಾಕಲೆ ಮಾತನಾಡಿ, ಔರಾದ ತಾಲ್ಲೂಕಿನ ವಿದ್ಯಾರ್ಥಿಗಳು ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದೇ ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಇಲ್ಲಿನ ಗ್ರಾಮೀಣ ಪ್ರದೇಶದಿಂದ ನಗರ ಪ್ರದೇಶಕ್ಕೆ ವಿದ್ಯಾಭ್ಯಾಸ ಮಾಡಲು ಬರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದ್ದು, ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಹಾಗಾಗಿ ತಾಲ್ಲೂಕಿನ ಎಲ್ಲ ಹಳ್ಳಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಡೇವಿಡ್, ಸಂಭಾಜಿ, ನಿತಿನ್ ಮುಳ್ಗೆ, ಸಂಗಮೇಶ್, ಬಾಲಾಜಿ, ದೇವಾನಂದ್ ಮತ್ತು ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.