ಬೀದರ್ | ಡಾ.ಗುರಮ್ಮ ಸಿದ್ಧಾರೆಡ್ಡಿಗೆ ಕಾಯಕ ಪ್ರಶಸ್ತಿ ಪ್ರಧಾನ

Update: 2024-12-22 13:46 GMT

ಬೀದರ್ : ಬೀದರ್‌ನ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಮುಖ್ಯ ಆಯುಕ್ತೆ ಡಾ.ಗುರಮ್ಮ ಸಿದ್ಧಾರೆಡ್ಡಿ ಅವರಿಗೆ ಡಾ.ಚನ್ನಬಸವ ಪಟ್ಟದ್ದೇವರು ಕಾಯಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಆಯೋಜಿಸಿದ ಡಾ.ಚನ್ನಬಸವ ಪಟ್ಟದ್ದೇವರ 135ನೇ ಜಯಂತ್ಯೋತ್ಸವ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಲಾಯಿತು.

ನಾರಂಜಾ ಸಹಕಾರ ಸಕ್ಕರೆ ಕಾರಖಾನೆ ಅಧ್ಯಕ್ಷ ಡಿ.ಕೆ.ಸಿದ್ರಾಮ ಅವರು ಪ್ರಶಸ್ತಿ ದಾಸೋಹಿಯಾಗಿ ನೀಡಿ ಗೌರವಿಸಿದರು. ಸಂಡೂರಿನ ಪ್ರಭು ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದರು.

ಈ ಸಂದರ್ಭದಲ್ಲಿ ಹವಾ ಮಲ್ಲಿನಾಥ ಮಹಾರಾಜ, ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು, ಮಾಜಿ ಶಾಸಕ ಪ್ರಕಾಶ ಖಂಡ್ರೆ, ಬುಡಾದ ಮಾಜಿ ಅಧ್ಯಕ್ಷ ಬಾಬು ವಾಲಿ, ಶಕುಂತಲಾ ಬೆಲ್ದಾಳೆ ನಂದಕುಮಾರ್ ದಾಶಟವಾರ್, ಮಲ್ಲಿಕಾರ್ಜುನ ರಗಟೆ, ಅಶೋಕ್ ಜುಬರೆ, ಡಾ.ಶಶಿಧರ ತೊರಕರ್, ಡಾ.ಕೆ.ರವೀಂದ್ರನಾಥ್, ಪುಷ್ಪಾ ಬಾಲಚಂದ್ರ ಜಯಶೆಟ್ಟಿ ಹಾಗೂ ರವಿಶಂಕರ ಕೊರಗಲ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News