ಬೀದರ್ | ಪ್ರತಿಭಟನಾ ವೇಳೆ ಕ್ರಿಮಿನಾಶಕ ಸೇವಿಸಿ ಇಬ್ಬರು ರೈತರು ಅಸ್ವಸ್ಥ
ಬೀದರ್ : ಕಾರಂಜಾ ಸಂತ್ರಸ್ತರ ಹೋರಾಟವು ತೀವ್ರ ಸ್ವರೂಪ ಪಡೆದಿದ್ದು, ಬೆಳೆಗಳಿಗೆ ಸಿಂಪಡಿಸುವ ಕ್ರಿಮಿನಾಶಕ ಸೇವಿಸಿ ಇಬ್ಬರು ರೈತರು ಅಸ್ವಸ್ಥರಾದ ಘಟನೆ ಗುರುವಾರ ನಗರದ ಪ್ರತಿಭಟನಾ ಸ್ಥಳದಲ್ಲಿ ನಡೆದಿದೆ.
ಕಳೆದ 890 ದಿನಗಳಿಂದ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿರುವ ಕಾರಂಜಾ ಸಂತ್ರಸ್ತರು, ವೈಜ್ಞಾನಿಕ ಪರಿಹಾರಕ್ಕಾಗಿ ನಿರಂತರ ಹೋರಾಟ ನಡೆಸುತ್ತಿದ್ದಾರೆ. ಸರಕಾರ ಗಮನ ಹರಿಸದೆ ಇರುವುದರಿಂದ ಬೇಸತ್ತ ಸಂತ್ರಸ್ತರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬುಧವಾರ ನಗರದ ಪ್ರತಿಭಟನಾ ಮೆರವಣಿಗೆ ನಡೆಸಿ ಸಾಮೂಹಿಕ ಆತ್ಮಹತ್ಯೆ ಪ್ರಹಸನ ಮಾಡುವ ವೇಳೆ ರೈತರನ್ನು ಪೊಲೀಸರು ಬಂಧಿಸಿದರು.
ಧರಣಿ ಸ್ಥಳದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ನಡೆಸಿದ್ದು, ಪೊಲೀಸರು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಸ್ವಸ್ಥ ರೈತರನ್ನು ಜಿಲ್ಲಾ ಸರಕಾರಿ ಆಸ್ಪತ್ರೆಗೆ (ಬ್ರಿಮ್ಸ್) ದಾಖಲು ಮಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.