ಬೀದರ್ | ವೃದ್ಧ ಆತ್ಮಹತ್ಯೆ

Update: 2025-04-18 14:05 IST
ಬೀದರ್ | ವೃದ್ಧ ಆತ್ಮಹತ್ಯೆ
  • whatsapp icon

ಬೀದರ್ : ನೇಣು ಬಿಗಿದುಕೊಂಡು ವೃದ್ಧನೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಬಸವಕಲ್ಯಾಣ ತಾಲ್ಲೂಕಿನ ಬಗದುರಿ ಹಾಗೂ ಹಣಮಂತವಾಡಿ ಗ್ರಾಮಗಳ ಮಧ್ಯ ಹೊಲದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಘಾಟ್ ಹಿಪ್ಪರಗಾ ಗ್ರಾಮದ ನಿವಾಸಿ ಮಾಣಿಕ್ ಕೊಳಸೂರೆ (80) ಎಂದು ಗುರುತಿಸಲಾಗಿದೆ.

ಮೃತಪಟ್ಟ ವೃದ್ಧನಿಗೆ ನಾಲ್ಕು ಜನ ಗಂಡು ಮಕ್ಕಳಿದ್ದು, ಎಲ್ಲರೂ ಬೇರೆ ಬೇರೆಕಡೆ ವಲಸೆ ಹೋಗಿ ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಒಬ್ಬ ಮಗ ಮೃತಪಟ್ಟಿದ್ದು, ಈತನ ಹೆಂಡತಿ ಕೂಡ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಇದರಿಂದಾಗಿ ಇತನೊಬ್ಬನೇ ಮನೆಯಲ್ಲಿದ್ದುದ್ದರಿಂದ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News