ಬೀದರ್ | ಎ. 27ರಂದು 6ನೇ ತರಗತಿಗೆ ಪ್ರವೇಶಾತಿ ಪರೀಕ್ಷೆ

ಸಾಂದರ್ಭಿಕ ಚಿತ್ರ
ಬೀದರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಹಾಗೂ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಎ.27 ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2025-26ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಅಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಗರದ ಮಾಮನಕೇರಿಯ ಜ್ಞಾನ ಸುಧಾ ವಿದ್ಯಾಲಯ, ಜನವಾಡ ರಸ್ತೆಯ ಸಿದ್ದಾರ್ಥ ಸಂಯುಕ್ತ ಪದವಿ ಪೂರ್ವ ಶಿಕ್ಷಣ ಸಂಸ್ಥೆ ಹಾಗೂ ಜನವಾಡ ರಸ್ತೆಯ ವಿದ್ಯಾರಣ್ಯ ಪ್ರೌಢ ಶಾಲೆಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್ https://dom.karnataka.gov.in ನಲ್ಲಿ ಅನ್ ಲೈನ್ ಮೂಲಕ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಜಿಲ್ಲಾ ಕಚೇರಿ, ತಾಲ್ಲೂಕು ಕಚೇರಿ ಅಥವಾ ಬೀದರ್ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ಉಮೇಶ ಮೊಬೈಲ್ : 94488 44387, ಹುಮನಾಬಾದ್ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿ ಶಿವಕುಮಾರ್ ಮೊಬೈಲ್ : 63618 79744 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.