ಬೀದರ್ | ಹಸಿ ಶುಂಠಿ ಖರೀದಿ ಕೇಂದ್ರಗಳ ಸ್ಥಾಪನೆ : ಪ್ರತಿ ಕ್ವಿಂಟಲ್ ಗೆ 2,445 ರೂ. ನಿಗದಿ

Update: 2025-04-23 18:42 IST
ಬೀದರ್ | ಹಸಿ ಶುಂಠಿ ಖರೀದಿ ಕೇಂದ್ರಗಳ ಸ್ಥಾಪನೆ : ಪ್ರತಿ ಕ್ವಿಂಟಲ್ ಗೆ 2,445 ರೂ. ನಿಗದಿ

ಸಾಂದರ್ಭಿಕ ಚಿತ್ರ

  • whatsapp icon

ಬೀದರ್ : 2024-25ನೇ ಸಾಲಿಗೆ ಭಾರತ ಸರ್ಕಾರವು ಘೋಷಿಸಿರುವ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 5 ಹಸಿ ಶುಂಠಿ ಖರೀದಿ ಕೇಂದ್ರ ಸ್ಥಾಪನೆ ಮಾಡಲಾಗಿದ್ದು, ಪ್ರತಿ ಕ್ವಿಂಟಲ್ ಹಸಿ ಶುಂಠಿಗೆ ಗೆ 2,445 ರೂ. ನಿಗದಿಪಡಿಸಲಾಗಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕ ಹಾಗೂ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ ಮಾರ್ಗಸೂಚಿಗಳ ಅನ್ವಯ ರೈತರಿಂದ ಹಸಿ ಶುಂಠಿ ಖರೀದಿಸಲು ಕರ್ನಾಟಕ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶದ ಅನ್ವಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿಯ ಅಧ್ಯಕ್ಷ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಜರುಗಿದ ಸಭೆಯ ನಡವಳಿಗಳ ಪ್ರಕಾರ ಜಿಲ್ಲೆಯಲ್ಲಿ ಹಸಿ ಶುಂಠಿ ಖರೀದಿ ಕೇಂದ್ರ ತೆರೆಯಲಾಗಿದೆ ಎಂದು ಅವರು ಹೇಳಿದ್ದಾರೆ.

ಹಸಿಶುಂಠಿ ಖರೀದಿ ಕೇಂದ್ರಗಳ ವಿವರ :

ಬೀದರ್ ತಾಲ್ಲೂಕಿನ ಮನ್ನಳ್ಳಿ, ಭಾಲ್ಕಿ ತಾಲ್ಲೂಕಿನ ಭಾತಂಬ್ರಾ, ಬಸವಕಲ್ಯಾಣ ತಾಲ್ಲೂಕಿನ ಮುಡಬಿ, ಹುಮನಾಬಾದ್ ತಾಲ್ಲೂಕಿನ ದುಬಲಗುಂಡಿ ಹಾಗೂ ಔರಾದ್ (ಬಾ) ತಾಲ್ಲೂಕಿನ ಜೋಜನಾ ಗ್ರಾಮಗಳಲ್ಲಿ ಹಸಿ ಶುಂಠಿ ಖರೀದಿ ಕೇಂದ್ರಗಳು ಪ್ರಾರಂಭಿಸಲಾಗಿದೆ.

ರಾಜ್ಯ ಸರ್ಕಾರ ಆದೇಶ ಹೊರಡಿಸಿದ ದಿನಾಂಕದಿಂದ ಎ.27 ರವರೆಗೆ ನೋಂದಣಿ ಜೊತೆಗೆ ಖರೀದಿ ಪ್ರಕ್ರಿಯೆ ಜರುಗಿಸಲು ನಿಗದಿಪಡಿಸಿದೆ. ಖರೀದಿ ಪ್ರಕ್ರಿಯೆಯಲ್ಲಿ ರೈತರು ಪ್ರತಿ ಎಕರೆಗೆ ಗರಿಷ್ಠ 30 ಕ್ವಿಂಟಾಲ್‌ ನಂತೆ ಹಾಗೂ ಪ್ರತಿ ರೈತರಿಗೆ ಗರಿಷ್ಠ 60 ಕ್ವಿಂಟಾಲ್‌ನಂತೆ FAQ ಗುಣಮಟ್ಟದ ಹಸಿಶುಂಠಿ ಉತ್ಪನ್ನವನ್ನು ಮಾರಾಟ ಮಾಡಬಹುದಾಗಿದೆ.

ಖರೀದಿ ಕೇಂದ್ರಗಳು ಲಾಗ್‌ ಇನ್ ಕ್ರೆಡೆನ್ಸಿಯಲ್ಸ್ ಗಳನ್ನು ಪಡೆದು ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದ ಮೇಲೆ ನೋಂದಣಿ ಮಾಡಿಕೊಳ್ಳಲು ಇಚ್ಛಿಸುವ ರೈತರು ಸಮೀಪದ ಖರೀದಿ ಕೇಂದ್ರಗಳಿಗೆ ನೋಂದಣಿ ಮಾಡಿಸಿಕೊಳ್ಳಬಹುದು. ಹಸಿಶುಂಠಿ ಉತ್ಪನ್ನವನ್ನು ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಮಾರಾಟ ಮಾಡಿ ಸದರಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News