ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ : ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದೇನು?

Update: 2024-12-26 15:14 GMT

 ಸಚಿವ ಪ್ರಿಯಾಂಕ್ ಖರ್ಗೆ

ಬೀದರ್ : "ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಪ್ರಕರಣದ ಸತ್ಯಾಸತ್ಯತೆಯನ್ನು ಹೊರತರುವಲ್ಲಿ ತನಿಖಾ ಸಂಸ್ಥೆಗಳು ಪರಿಣಾಮಕಾರಿಯಾಗಿ ತನಿಖೆ ಮಾಡಲಿದ್ದಾರೆ" ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ʼಎಕ್ಸ್‌ʼ ಬರೆದುಕೊಂಡಿರುವ ಅವರು, "ಈ ಪ್ರಕರಣದಲ್ಲಿ ಹೆಸರಿಸಿರುವ ಆರೋಪಿಗಳ ಹೇಳಿಕೆಗಳು ಒಂದು ಬಗೆಯಲ್ಲಿವೆ, ಸಚಿನ್ ಬರೆದಿದ್ದೆನ್ನಲಾಗಿರುವ ಡೆತ್ ನೋಟ್ ನಲ್ಲಿ ಇನ್ನೊಂದು ಬಗೆಯ ವಿಷಯಗಳು ಕಂಡು ಬರುತ್ತವೆ" ಎಂದಿದ್ದಾರೆ.

"ಮಿಥ್ಯಾರೋಪ ಮಾಡುವುದು ಬಿಜೆಪಿಯವರ ಹಳೆಯ ಅಭ್ಯಾಸ, ಈ ಹಿಂದೆಯೂ ನನ್ನ ಮೇಲೆ ನಿರಾಧಾರ ಆರೋಪ ಮಾಡಿದ್ದರು, ಈಗಲೂ ಮಾಡುತ್ತಿದ್ದಾರೆ, ಮುಂದೆಯೂ ಮಾಡುತ್ತಿರುತ್ತಾರೆ. ಬಿಜೆಪಿಯವರು ಅ ಪ್ರಯತ್ನ ಮುಂದುವರೆಸುತ್ತಲೇ ಇರಲಿ. ಆದರೆ ಆಧಾರ ರಹಿತ ಆರೋಪಗಳಿಂದ ನನ್ನನ್ನು ಕುಗ್ಗಿಸುವ ಬಿಜೆಪಿಯವರ ಪ್ರಯತ್ನ ಯಶಸ್ವಿಯಾಗುವುದಿಲ್ಲ" ಎಂದಿದ್ದಾರೆ.

"ಆತ್ಮಹತ್ಯೆ ಮಾಡಿಕೊಂಡ ಬೀದರ್ ಜಿಲ್ಲೆಯ ಯುವಕ ಸಚಿನ್ ಪಾಂಚಾಳರ ಸಾವು ದುರದೃಷ್ಟಕರವಾದುದು, ಸಚಿನ್ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಆಶಿಸುತ್ತೇನೆ. ಈಗಾಗಲೇ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದ ಸತ್ಯಾಸತ್ಯತೆಯನ್ನು ಹೊರತರುವಲ್ಲಿ ತನಿಖಾ ಸಂಸ್ಥೆಗಳು ಪರಿಣಾಮಕಾರಿಯಾಗಿ ತನಿಖೆ ಮಾಡಲಿದ್ದಾರೆ" ಎಂದು ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News