ಬೀದರ್ | ತಾಲೂಕು ಮಟ್ಟದ ಶರಣರ ಸ್ಪರ್ಧೆ ಉದ್ಘಾಟನೆ

Update: 2024-11-12 15:31 GMT

ಬೀದರ್ : ಇಂದಿನ ಆಧುನಿಕ ಯುಗದಲ್ಲಿ ಮಕ್ಕಳಲ್ಲಿ ಸಂಸ್ಕಾರ ಮತ್ತು ಸಂಸ್ಕೃತಿ ಬೆಳೆಸುವುದು ಅಗತ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚೆನ್ನಬಸಪ್ಪ ಹಳ್ಳದ ಹೇಳಿದ್ದಾರೆ.

ಭಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದ ಕುಂಬಾರ ಗುಂಡಯ್ಯ ಕಲ್ಯಾಣ ಮಂಟಪದಲ್ಲಿ ವಿಶ್ವಬಸವ ಧರ್ಮ ಟ್ರಸ್ಟ್ ವತಿಯಿಂದ 45ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವ-2024ರ ನಿಮಿತ್ತ ಮಂಗಳವಾರ ಆಯೋಜಿಸಿದ್ದ ತಾಲೂಕು ಮಟ್ಟದ ಶರಣರ ಕುರಿತ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಟಿವಿ, ಮೊಬೈಲ್ ಅತಿಯಾದ ಬಳಕೆಯಿಂದ ಮಕ್ಕಳಲ್ಲಿ ಓದುವ ಹವ್ಯಾಸ, ನೆನಪಿನ ಶಕ್ತಿ ಕಡಿಮೆಯಾಗುತ್ತಿದೆ. ಸಂಸ್ಕಾರ, ಸಂಸ್ಕೃತಿ ಮರೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇದರಿಂದ ಹೊರ ಬರಲು ಮಕ್ಕಳು ಓದಿನ ಜತೆಗೆ ಬಸವಾದಿ ಶರಣರ ಚರಿತ್ರೆ ಅಧ್ಯಯನ ಮಾಡಬೇಕು. ವಚನ ಸಾಹಿತ್ಯ ಮನುಷ್ಯನ ಬದುಕಿಗೆ ಪೂರಕವಾಗಿದೆ. ಪ್ರತಿಯೊಬ್ಬರು ವಚನಗಳು ಬಗ್ಗೆ ತಿಳಿದುಕೊಂಡು ಅದರಂತೆ ನಡೆದುಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಶಂಭುಲಿಂಗ ಕಾಮಣ್ಣ, ತಾಲೂಕು ಕಸಾಪ ಅಧ್ಯಕ್ಷ ನಾಗಭೂಷಣ ಮಾಮಡಿ, ಗುಂಡಪ್ಪ ಸಂಗಮಕರ್, ಬಂಡೆಪ್ಪ ಶರಣರು, ಶಿವಾಜಿರಾವ ಸಗರ, ಸಾಹಿತಿ ರಾಜು ಜುಬರೆ, ಸಂತೋಷ ನಾಟೇಕರ್, ಲಕ್ಷ್ಮಣ ಮೇತ್ರೆ, ಬಸವರಾಜ ಪ್ರಭಾ, ಬಾಬು ಬೆಲ್ದಾಳ, ಈಶ್ವರ ರುಮ್ಮಾ ಮತ್ತಿತರರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News