ಬೀದರ್ | ಶಾಸಕ ಪ್ರಭು ಚವ್ಹಾಣ ಅವರಿಂದ ವಸತಿ ಶಾಲೆ ಕಾಮಗಾರಿ ಪರಿಶೀಲನೆ

Update: 2024-11-16 18:23 IST
Photo of Prabhu Chavan
  • whatsapp icon

ಬೀದರ್ : ಕಮಲನಗರ ತಾಲ್ಲೂಕಿನ ಹೊರಂಡಿಯಲ್ಲಿ ಹೊಸದಾಗಿ ನಿರ್ಮಿಸುತ್ತಿರುವ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಗೆ ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ನ.16ರಂದು ಭೇಟಿ ನೀಡಿ ಕಾಮಗಾರಿಯನ್ನು ವೀಕ್ಷಿಸಿದರು.

ಕಟ್ಟಡ ನಿರ್ಮಾಣ ಸ್ಥಳದಲ್ಲಿ ಓಡಾಡಿ ನಿರ್ಮಾಣವಾಗುತ್ತಿರುವ ಕಟ್ಟಡವನ್ನು ಗಮನಿಸಿದರು. ಅಧಿಕಾರಿಗಳಿಂದ ಕೆಲಸದ ಬಗ್ಗೆ ವಿವರಣೆ ಪಡೆದರು.

ಸ್ಥಳೀಯರು ಕೂಡ ಕಾಮಗಾರಿಯ ಗುಣಮಟ್ಟದ ಬಗ್ಗೆ ಶಾಸಕರೊಂದಿಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು . ಹೊಸದಾಗಿ ನಿರ್ಮಿಸುತ್ತಿರುವ ಕಟ್ಟಡಕ್ಕೆ ಸರಿಯಾಗಿ ಕ್ಯೂರಿಂಗ್ ಮಾಡುತ್ತಿಲ್ಲ. ಇದರಿಂದ ಮುಂದಿನ ದಿನಗಳಲ್ಲಿ ಕಟ್ಟಡ ಬೇಗ ಶಿಥಿಲವಾಗುವ ಸಾಧ್ಯತೆಗಳು ಇರುತ್ತವೆ ಎಂದು ತಿಳಿಸಿದರು.

ಶಾಸಕರು ಮಾತನಾಡಿ, ಕಿರಿಯ ಇಂಜಿನಿಯರು ಕಡ್ಡಾಯವಾಗಿ ಕಾಮಗಾರಿ ಸ್ಥಳದಲ್ಲಿದ್ದು, ಕೆಲಸ ಹೇಗೆ ನಡೆಯುತ್ತಿದೆ ಎಂಬುದನ್ನು ಗಮನಿಸಬೇಕು. ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಮತ್ತಿತರೆ ಅಧಿಕಾರಿಗಳು ಕೂಡ ಕಾಮಗಾರಿ ಸ್ಥಳಕ್ಕೆ ಆಗಾಗ ಭೇಟಿ ನೀಡುತ್ತಿರಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಕಮಲನಗರ ತಹಶೀಲ್ದಾರ್ ಅಮಿತಕುಮಾರ ಕುಲಕರ್ಣಿ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಶಿವಾಜಿರಾವ ಪಾಟೀಲ ಮುಂಗನಾಳ, ರಂಗರಾವ ಜಾಧವ, ಬಸವರಾಜ ಪಾಟೀಲ, ಶಿವಾನಂದ ಒಡ್ಡೆ, ಸಚಿನ ರಾಠೋಡ್, ಶಿವರಾಜ ಅಲ್ಮಾಜೆ, ಶಾಲಿವಾನ ಹೊರಂಡಿ, ಬಂಟಿ ರಾಂಪೂರೆ, ಇತರರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News