ಬೀದರ್ | ʼಕರ್ನಾಟಕ ಸಂಭ್ರಮ-50ʼರ ಸವಿನೆನಪಿಗೆ ಹಲ್ಮಿಡಿ ಶಾಸನ ಪ್ರತಿಕೃತಿ ಸ್ಥಾಪನೆ : ಸಚಿವ ಈಶ್ವರ್‌ ಬಿ.ಖಂಡ್ರೆ

Update: 2024-11-01 14:19 GMT

ಬೀದರ್‌ : ಕನ್ನಡ ಬಾಷೆಗೆ ಅಂತ್ಯದ ಶ್ರೀಮಂತವಾದ ಹಿನ್ನೆಲೆ ಇದ್ದು, ಕರ್ನಾಟಕ ಸಂಭ್ರಮ-50ರ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿ ಸ್ಥಾಪಿಸುವ ಮೂಲಕ ಈ ನೆನಪನ್ನು ಶಾಶ್ವತವಾಗಿಡುವ ಉದ್ದೇಶದಿಂದ  ನಗರದ ಡಾ.ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ನಿರ್ಮಿಸಿದ ಪ್ರತಿಕೃತಿಯನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್‌ ಬಿ.ಖಂಡ್ರೆ ಅವರು ಅನಾವರಣಗೊಳಿಸಿ ಮಾತನಾಡಿದರು.

ಕ್ರಿ.ಶ.450ನೇ ಇಸವಿಯಲ್ಲಿ ಕಟ್ಟಲ್ಪಟ್ಟಿರುವ ಈ ಶಾಸನವು ಕದಂಬರ ರಾಜ ಕಾಕುಸ್ಥ ವರ್ಮನ ಆದಿಪತ್ಯವನ್ನು ಹೇಳುತ್ತದೆ. ಈ ಶಾಸನ ವಿರಗಲ್ಲು ಎಂದು ಪರಿಗಣಿಸಲ್ಪಡುತ್ತಿದೆ. ಕನ್ನಡ ಲಿಪಿಯು ವಿಭಿನ್ನವಾಗಿದ್ದರೂ ಸಹ ಶಾಸನದಲ್ಲಿರುವ ವಿಷಯ ಮತ್ತು ನುಡಿಯು ಕನ್ನಡ ನಾಡಿನ ಹಿರಿಮೆಯನ್ನು ತಿಳಿಸುತ್ತದೆ. ಈ ಶಾಸನದ ತಿರುಳನ್ನು ಹೊಸ ಗನ್ನಡ ನುಡಿಯಲ್ಲಿ ಕೆತ್ತಿಸಿ ಬೆಂಗಳೂರಿನ ರಾಜ್ಯ ಪುರಾತತ್ವ ಹೊಸ ಗನ್ನಡ ನುಡಿಯಲ್ಲಿ ಕೆತ್ತಿಸಿ ಬೆಂಗಳೂರಿನ ರಾಜ್ಯ ಪುರಾತತ್ವ ಸಂಗ್ರಹಾಲಯದಲ್ಲಿ ಸಂರಕ್ಷಿಸಿಡಲಾಗಿದೆ. ಅದರ ಪ್ರತಿಕೃತಿಯನ್ನು ರಾಜ್ಯದ 31 ಜಿಲ್ಲೆಗಳಲ್ಲಿ ಸರಕಾರದ ವತಿಯಿಂದ ಸ್ಥಾಪಿಸಿ ಇದರ ಶ್ರೀಮಂತಿಕೆಯನ್ನು ಎಲ್ಲರಿಗೂ ಪರಿಚಯ ಮಾಡಿಕೊಡುವ ಉದ್ದೇಶದಿಂದ ಸ್ಥಾಪಿಸಲಾಗಿದೆ. ಮಕ್ಕಳಿಗೆ ಇತಿಹಾಸ ಅರಿಯಲು ಇದು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್, ನಗರಸಭೆ ಅಧ್ಯಕ್ಷರಾದ ಮುಹಮ್ಮದ್‌ ಗೌಸ, ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಶಿಂಧೆ, ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಜ ಸಂಜೀವಕುಮಾರ ಅತಿವಾಳೆ, ಜಾನಪದ ಅಕಾಡೆಮಿ ಸದಸ್ಯರಾದ ವಿಜಯಕುಮಾರ ಸೋನಾರೆ, ಕನ್ನಡಪರ ಸಂಘಟನೆಗಳ ಸದಸ್ಯರು, ಅಧಿಕಾರಿ ಸಿಬ್ಬಂದಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News