ಬೀದರ್ | ಸಚಿವರು ಜಂಟಿ ಸಭೆ ನಡೆಸಿ ಸಮಸ್ಯೆ ಬಗೆಹರಿಸಲಿ : ಸ್ವಾಮಿದಾಸ್ ಕೆಂಪೆನೋರ್
Update: 2024-12-02 14:40 GMT
ಬೀದರ್ : ಕಾರಂಜಾ ಸಂತ್ರಸ್ತರ ಹೋರಾಟ ಮತ್ತು ಬಿ.ಎಸ್.ಎಸ್.ಕೆ. ಕಾರ್ಮಿಕರ ಸಮಸ್ಯೆ ಬಗೆಹರಿಸಲು ಸಚಿವರು ವಿಶೇಷ ಜಂಟಿ ಸಭೆ ನಡೆಸಬೇಕು ಎಂದು ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆಯ ಸಂಸ್ಥಾಪಕ ಅಧ್ಯಕ್ಷರಾದ ಸ್ವಾಮಿದಾಸ ಕೆಂಪೆನೋರ್ ಒತ್ತಾಯಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಚಳಿಗಾಲ ಅಧಿವೇಶನದ ಮೊದಲೇ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಜ್ವಲಂತ ಸಮಸ್ಯೆಗಳಾದ ಕಾರಂಜಾ ಮುಳುಗಡೆ ಸಂತ್ರಸ್ತರ ವೈಜ್ಞಾನಿಕ ಪರಿಹಾರಕ್ಕೆ ಮತ್ತು ಕಾರ್ಖಾನೆ ಕಾರ್ಮಿಕರ ವೇತನ ಹಾಗೂ ಕಾರ್ಖಾನೆಯನ್ನು ಪುನಃ ಪ್ರಾರಂಭಕ್ಕೆ ವಿಶೇಷ ಜಂಟಿ ಸಭೆ ಕರೆಯಬೇಕು ಎಂದಿದ್ದಾರೆ.
ಸಚಿವರು ಕೇವಲ ಪತ್ರಿಕೆ ಹೇಳಿಕೆ ನೀಡಿದರೆ ಸಮಸ್ಯೆ ಬಗೆಹರಿಯುವುದಿಲ್ಲ. ಅವರು ಮಧ್ಯಸ್ಥಿಕೆ ವಹಿಸುವ ಮೂಲಕ ರೈತ ಮತ್ತು ಕಾರ್ಮಿಕರ ಬಗ್ಗೆ ಕಾಳಜಿ ವಹಿಸಿ ನೊಂದವರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿದ್ದಾರೆ.