ಬೀದರ್ | ಲೋಕಾಯುಕ್ತ ದಾಳಿ : 4 ಕೋಟಿ ರೂ.ಗೂ ಅಧಿಕ ಅಕ್ರಮ ಆಸ್ತಿ ಪತ್ತೆ
Update: 2024-11-12 14:08 GMT
ಬೀದರ್ : ಅಕ್ರಮವಾಗಿ ಆಸ್ತಿ ಮಾಡಿದ್ದಾರೆ ಎಂಬ ದೂರುಗಳ ಮೇರೆಗೆ ಲೋಕಾಯುಕ್ತ ಪೊಲೀಸರ ತಂಡ ಬೀದರ್ ಜಿಲ್ಲೆಯ ಎರಡು ಕಡೆ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದು, ಅಂದಾಜು 4 ಕೋಟಿ ರೂ.ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿರುವುದು ತಿಳಿದುಬಂದಿದ್ದು, ಇನ್ನೂ ಶೋಧ ಕಾರ್ಯ ಮುಂದುವರೆದಿದೆ ಎಂದು ಕಲಬುರಗಿ ಲೋಕಾಯುಕ್ತ ಎಸ್ಪಿ ಉಮೇಶ್ ಬಿ.ಕೆ. ತಿಳಿಸಿದ್ದಾರೆ.
ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ರವೀಂದ್ರಕುಮಾರ್ ರೊಟ್ಟಿ ಅವರ ಬೀದರ್ ನಿವಾಸ ಹಾಗೂ ಇಲ್ಲಿನ ನೌಬಾದ್‌ನಲ್ಲಿರುವ ಕಚೇರಿ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಡಿವೈಎಸ್ಪಿ ಹನುಮಂತ ನೇತೃತ್ವದಲ್ಲಿ ದಾಳಿಯಾಗಿದ್ದು, ಜಿಲ್ಲೆಯ ಗುಂಪಾ ನಿವಾಸದಲ್ಲೂ ದಾಖಲೆಗಳ ಪರಿಶೀಲನೆ ಕಾರ್ಯ ಮುಂದುವರೆದಿದೆ ಎನ್ನಲಾಗಿದೆ.
ಇದಕ್ಕೂ ಮೊದಲು ರವೀಂದ್ರಕುಮಾರ್ ರೊಟ್ಟಿ ಬೀದರ್ ಡಿಸಿ ಕಚೇರಿಯಲ್ಲಿ ಶಿರಸ್ತೇದಾರ ಹಾಗೂ ಬಿಬಿಎಂಪಿಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.