ಬೀದರ್ | ನಾಳೆ ಲೋಕಾಯುಕ್ತ ಅಹವಾಲು ಸಭೆ

ಬೀದರ್ : ಕರ್ನಾಟಕ ಲೋಕಾಯುಕ್ತ ಜಿಲ್ಲಾ ಪೊಲೀಸ್ ಠಾಣೆ ವತಿಯಿಂದ ಚಿಟಗುಪ್ಪಾ ಎಲ್ಲಾ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಎ.7 ರ ಬೆಳಿಗ್ಗೆ 10:30 ಗಂಟೆಗೆ ಚಿಟಗುಪ್ಪಾ ಪುರಸಭೆ ಸಭಾಂಗಣದಲ್ಲಿ ಸಾರ್ವಜನಿಕ ಕುಂದು ಕೊರತೆ, ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಭೆಯಲ್ಲಿ ಸಾರ್ವಜನಿಕ ಸರ್ಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸಗಳಲ್ಲಿ ವಿಳಂಬವಾಗಿದ್ದರೆ, ಅಧಿಕಾರಿಗಳು ನ್ಯಾಯ ಸಮ್ಮತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ತೊಂದರೆ ನೀಡುತ್ತಿದ್ದರೆ ಅಥವಾ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳಿದ್ದಲ್ಲಿ ಈ ಸಭೆಗೆ ನೇರವಾಗಿ ಬಂದು ಅರ್ಜಿ ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳೊಂದಿಗೆ ಕೆಲಸ ನೆರವೇರಿಸಿಕೊಳ್ಳಲು ಅಥವಾ ಸ್ಥಳದಲ್ಲಿಯೇ ದೂರು ಅರ್ಜಿ ಫಾರಂ ನಂ.1 ಮತ್ತು 2 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.