ಬೀದರ್ | ನರ್ಸಿಂಗ್ ಬಾಲಕಿಯರ ವಸತಿ ಗೃಹ ಕಾಮಗಾರಿಗಳ ಶಿಲಾನ್ಯಾಸ ನೆರವೇರಿಸಿದ ಸಚಿವ ಈಶ್ವರ್ ಖಂಡ್ರೆ

Update: 2024-12-03 11:11 GMT

ಬೀದರ್ | ಸಚಿವ ಈಶ್ವರ್ ಖಂಡ್ರೆ ಅವರು ಜಿಲ್ಲೆಯ ಬ್ರಿಮ್ಸ್ ಆಸ್ಪತ್ರೆಯ ಆವರಣದಲ್ಲಿ ನರ್ಸಿಂಗ್ ಬಾಲಕಿಯರ ವಸತಿ ಗೃಹ ಮತ್ತು ಡಿ.ಐ.ಪಿ.ಎಚ್.ಎಲ್ ಲ್ಯಾಬ್ ನಿರ್ಮಾಣ ಕಾಮಗಾರಿಗಳ ಶಿಲಾನ್ಯಾಸ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸುಮಾರು 4.5 ಕೋಟಿ ರೂ. ವೆಚ್ಚದ ಬಿ.ಎಸ್ಸಿ ನರ್ಸಿಂಗ್ ಬಾಲಕಿಯರ ವಸತಿ ಗೃಹ ಹಾಗೂ ಸುಮಾರು 1.11 ಕೋಟಿ ರೂ. ವೆಚ್ಚದ ಬ್ರಿಮ್ಸ್ ಆಸ್ಪತ್ರೆಯಲ್ಲಿ ನೂತನ ಡಿ.ಐ.ಪಿ.ಎಚ್.ಎಲ್ ಲ್ಯಾಬ್ ನಿರ್ಮಾಣ ಕಾಮಗಾರಿ ಇದಾಗಿದೆ ಎಂದು ಅವರು ತಿಳಿಸಿದರು.

ಆರೋಗ್ಯ ಸೇವೆಗಳ ಉತ್ತಮೀಕರಣಕ್ಕಾಗಿ ಸರಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಗುಣಮಟ್ಟದ ವಸತಿ ವ್ಯವಸ್ಥೆ ನೀಡುವ ನಿಟ್ಟಿನಲ್ಲಿ ಈ ವಸತಿ ಗೃಹ ನಿರ್ಮಾಣ ಮಾಡಲಾಗುತ್ತಿದೆ. ಹೊಸ ಲ್ಯಾಬ್ ಸ್ಥಾಪನೆಯಿಂದ ಸಂಶೋಧನೆ ಮತ್ತು ಆರೋಗ್ಯ ತಪಾಸಣೆಗಳಲ್ಲಿ ಗುಣಮಟ್ಟ ಹೆಚ್ಚಲಿದೆ ಎಂದರು.

ಕಾರ್ಯಕ್ರಮದಲ್ಲಿ ಸಚಿವರಾದ ರಹಿಂ ಖಾನ್, ಬ್ರಿಮ್ಸ್ ಆಸ್ಪತ್ರೆಯ ಅಧಿಕಾರಿಗಳು, ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News