ಬೀದರ್ | ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Update: 2025-04-25 20:29 IST
ಬೀದರ್ | ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
  • whatsapp icon

ಬೀದರ್ : 2025-26ನೇ ಸಾಲಿಗೆ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಹಾಗೂ ಪಾರ್ಸಿ ಜನಾಂಗದವರಿಗೆ ಅರಿವು ವಿದ್ಯಾಭ್ಯಾಸ ಸಾಲ ಯೋಜನೆ ಅಡಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA /CET/NEET ಮುಖಾಂತರ) ಎಂಬಿಬಿಎಸ್, ಬಿಡಿಎಸ್, ಬಿ.ಆಯುಷ್, ಬ್ಯಾಚುಲರ ಆಫ್ ಆರ್ಕ್, ಬಿ.ಇ., ಬಿ.ಟೆಕ್, ಫಾರ್ಮಸಿ, ಅಗ್ರಿಕಲ್ಚರ್ ಸೈನ್ಸ್ ಹಾಗೂ ವೆಟರ್ನರಿ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸಾಲ ನಿಡಲಾಗುತ್ತದೆ.

CET, NEET ಮುಖಾಂತರ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಗೆ ಅರಿವು ಯೋಜನೆಯಡಿ ಶೈಕ್ಷಣಿಕ ಸಾಲ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್‌ಸೈಟ್: https://kmdconline.karnataka.gov.in/ ಮೂಲಕ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಭರ್ತಿ ಮಾಡಿದ ಕೂಡಲೇ ಅರ್ಜಿಯ ಪ್ರಿಂಟ್‌ ಔಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸೆಸೆಲ್ಸಿ ಮತ್ತು ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, 4 ಫೋಟೊ, ಸಿಇಟಿ ಪ್ರವೇಶ ಪತ್ರದ ಪ್ರತಿ ಮತ್ತು 100 ರೂ.  ನೋಟರಿ ಮಾಡಿಸಿದ ಛಾಪಾ ಕಾಗದಲ್ಲಿ ಇಂಡೆಮ್ನಿಟಿ ಬಾಂಡ್ ಈ ಎಲ್ಲಾ ದಾಖಲಾತಿಗಳು ಸಲ್ಲಿಸಬೇಕು.

ದಾಖಲಾತಿ ಸಲ್ಲಿಸುವ ವಿಳಾಸ : ಜಿಲ್ಲಾ ವ್ಯವಸ್ಥಾಪಕರು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧ ನಿಗಮ (ನಿ), ಮೌಲಾನಾ ಆಜಾದ ಭವನ, ಗುರುನಾನಕ ಝಿರಾ ದಿಂದ ಚಿಕಪೇಟ್ ರಿಂಗ ರಸ್ತೆ, ಬೀದರ್.

ಹೆಚ್ಚಿನ ಮಾಹಿತಿ ಪಡೆಯಲು ಕಚೇರಿಯ ದೂರವಾಣಿ ಸಂಖ್ಯೆ : 08482-467330ಗೆ ಸಂಪರ್ಕಿಸಬಹುದಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ.23 ರಂದು ಕೊನೆಯ ದಿನಾಂಕವಾಗಿದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News