ಬೀದರ್: ಅಂಬೇಡ್ಕರ್ ಭಾವಚಿತ್ರಕ್ಕೆ ಪುನಃ ಅವಮಾನ ಮಾಡಿದ ಕಿಡಿಗೇಡಿಗಳು

Update: 2025-01-05 03:14 GMT

ಬೀದರ್ : ಜಿಲ್ಲೆಯ ಜನವಾಡಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ವಿಳಾಸಪುರ್ ಗ್ರಾಮದಲ್ಲಿ ಮತ್ತೊಮ್ಮೆ ಬ್ಯಾನರಲ್ಲಿರುವ ಅಂಬೇಡ್ಕರ್ ಭಾವಚಿತ್ರಕ್ಕೆ ಸೆಗಣಿ ಬಳಿದು ಅವಮಾನ ಮಾಡಲಾಗಿದೆ.

ರಾತ್ರಿ ಸಮಯದಲ್ಲಿ ಭೀಮಾ ಕೊರೆಗಾಂವ್ ವಿಜಯೋತ್ಸವದ ಬ್ಯಾನರಲ್ಲಿ ಇರುವ ಅಂಬೇಡ್ಕರ್ ಭಾವಚಿತ್ರಕ್ಕೆ ಸೆಗಣಿ ಬಳಿದು ಅವಮಾನ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇಂದು ಮುಂಜಾನೆ ಇದನ್ನು ಗಮನಿಸಿದ ದಲಿತರು, ಸ್ಥಳದಲ್ಲಿ ಜಮಾಯಿಸಿ ಆಕ್ರೋಶ ಹೊರಹಾಕಿದ್ದಾರೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಡಿ. 12 ರ ರಾತ್ರಿ ವಿಳಾಸಪುರ್ ಗ್ರಾಮದ ಅಂಬೇಡ್ಕರ್ ಪ್ರತಿಮೆಗೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಲಾಗಿತ್ತು. ಘಟನಾ ಸ್ಥಳಕ್ಕೆ ಜಿಲ್ಲಾ ವರಿಷ್ಠಾಧಿಕಾರಿಗಳು ಭೇಟಿ ನೀಡಿದ್ದರು. ಘಟನೆ ಖಂಡಿಸಿ ದಲಿತ ಸಂಘಟನೆಗಳು ಜಿಲ್ಲಾದ್ಯಂತ ಪ್ರತಿಭಟನೆ ನಡೆಸಿದವು. ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧನ ಮಾಡಲಾಗಿತ್ತು.

ಘಟನಾ ಸ್ಥಳಕ್ಕೆ ಜನವಾಡ ಪೊಲೀಸ್ ಠಾಣೆಯ ಪಿಎಸ್ಐ ಭೇಟಿ  ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News