ಬೀದರ್ | ಒಗ್ಗರಣೆ ಅನ್ನ ಸೇವಿಸಿ 50ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು
Update: 2024-11-13 07:18 GMT
ಬೀದರ್ : ಒಗ್ಗರಣೆ ಅನ್ನ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್‌ನಲ್ಲಿ ನಡೆದಿದೆ.
ಬಸವತೀರ್ಥ ವಿದ್ಯಾಪೀಠ ಶಾಲೆಯಲ್ಲಿ ಈ ಘಟನೆ ನಡೆದಿದೆ. ಒಗ್ಗರಣೆ ಅನ್ನ ತಿಂದು 50 ಮಕ್ಕಳಿಗೆ ವಾಂ-ಬೇಧಿ ಕಾಣಿಸಿಕೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ನಿನ್ನೆ ರಾತ್ರಿ ಉಳಿದ ಅನ್ನಕ್ಕೆ ಇಂದು ಒಗ್ಗರಣೆ ಹಾಕಿ ಕೊಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹುಮನಾಬಾದ್ ಪಟ್ಟಣದ ಹೊರವಲಯದ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಆಸ್ಪತ್ರೆಗೆ ಎಂಎಲ್‌ಸಿ ಭೀಮಾರಾವ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.