ಬೀದರ್ : ಜಿಲ್ಲಾ ವಕೀಲರ ಸಂಘದ ಕಟ್ಟಡದಲ್ಲಿ ಲಿಫ್ಟ್ ಕಾಮಗಾರಿಗೆ ಸಂಸದ ಸಾಗರ್ ಖಂಡ್ರೆ ಚಾಲನೆ

Update: 2025-03-05 14:01 IST
ಬೀದರ್ : ಜಿಲ್ಲಾ ವಕೀಲರ ಸಂಘದ ಕಟ್ಟಡದಲ್ಲಿ ಲಿಫ್ಟ್ ಕಾಮಗಾರಿಗೆ ಸಂಸದ ಸಾಗರ್ ಖಂಡ್ರೆ ಚಾಲನೆ
  • whatsapp icon

ಬೀದರ್ : ಜಿಲ್ಲಾ ವಕೀಲರ ಸಂಘದ ಕಟ್ಟಡದಲ್ಲಿ ಲಿಫ್ಟ್ ಅಳವಡಿಕೆ ಕಾಮಗಾರಿಗೆ ಸಂಸದ ಸಾಗರ್ ಖಂಡ್ರೆ ಅವರು ಮಂಗಳವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾನು ವಕೀಲನಾಗಿದ್ದು, ವಕೀಲರ ಸಂಘದ ಸದಸ್ಯನಾಗಿದ್ದೇನೆ. ವಕೀಲರ ಸಮಸ್ಯೆಗಳ ಪರಿಹಾರ ಹಾಗೂ ಬೇಡಿಕೆಗಳು ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುವೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿ, ಗೆಲ್ಲಿಸಿದ ವಕೀಲರಿಗೆ ಕೃತಜ್ಞತೆ ಸಲ್ಲಿಸುವೆ ಎಂದು ಹೇಳಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶಿವಶರಣಪ್ಪ (ಪಪ್ಪು) ಪಾಟೀಲ್ ಮಾತನಾಡಿ, ವಕೀಲರ ಸಂಘದ ಕಟ್ಟಡ 2018 ರಲ್ಲೇ ಪೂರ್ಣಗೊಂಡಿದೆ. ಆದರೆ, ಆ ಕಟ್ಟಡದಲ್ಲಿ ಲಿಫ್ಟ್ ಅಳವಡಿಕೆ ಆಗಿರಲಿಲ್ಲ. ಇದೀಗ ಲಿಫ್ಟ್ ಅಳವಡಿಕೆ ಕಾಮಗಾರಿ ಆರಂಭವಾಗಿರುವುದು ಸಂತಸ ಉಂಟು ಮಾಡಿದೆ ಎಂದು ತಿಳಿಸಿದರು.

ಸರ್ಕಾರ ವಕೀಲರ ಗೃಹ ನಿರ್ಮಾಣ ಮಂಡಳಿ ಸ್ಥಾಪಿಸಬೇಕು. ವಕೀಲರ ಸಂಘದ ಕಟ್ಟಡಕ್ಕೆ ಸೋಲಾರ್ ಘಟಕ ಅಳವಡಿಸಲು ಅನುದಾನ ಒದಗಿಸಬೇಕು. ಹಾಗೆಯೇ ಯುವ ವಕೀಲರ ಪ್ರೋತ್ಸಾಹ ಧನ ಹೆಚ್ಚಿಸಬೇಕು ಎಂದು ಬೇಡಿಕೆ ಇಟ್ಟರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ವಿ.ಎಂ. ಆನಂದಶೆಟ್ಟಿ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಗುಂಡರೆಡ್ಡಿ ಗುಡಾಡಿ, ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಬಿರಾದಾರ್, ಜಂಟಿ ಕಾರ್ಯದರ್ಶಿ ಶಿಲ್ಪಾ ಪಾಟೀಲ್ ಹಾಗೂ ಖಜಾಂಚಿ ಪ್ಯಾರುಸಾಬ್ ಎಂ. ಶೇಕ್ ಸೇರಿದಂತೆ ಇತರರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News