ಬೀದರ್ | ಕನಿಷ್ಠ ಬೆಂಬಲ ಬೆಲೆಗೆ ಭತ್ತ, ಜೋಳ ಖರೀದಿ ಕೇಂದ್ರ ಪ್ರಾರಂಭ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
ಬೀದರ್ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ಜೋಳ ಖರೀದಿ ಕೇಂದ್ರ ಪ್ರಾರಂಭ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರದ ಆದೇಶದಂತೆ 2024-25ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ರೈತರಿಂದ ಭತ್ತ (ಸಾಮಾನ್ಯ ಪ್ರತಿ ಕ್ವಿಂಟಾಲ್‌ಗೆ 2,300 ರೂ.) ಹಾಗೂ ಭತ್ತ (ಗ್ರೇಡ್-ಎ ಪ್ರತಿ ಕ್ವಿಂಟಾಲ್‌ಗೆ 2,320 ರೂ.) ರಂತೆ ಖರೀದಿಸಲು ಹಾಗೂ ಬಿಳಿಜೋಳ (ಹೈಬ್ರಿಡ್ ಪ್ರತಿ ಕ್ವಿಂಟಾಲ್‌ಗೆ 3371 ರೂ.) ಮತ್ತು ಬಿಳಿಜೋಳ (ಮಾಲ್ದಂಡಿ ಪ್ರತಿ ಕ್ವಿಂಟಾಲ್‌ಗೆ 3,421 ರೂ.) ರಂತೆ ಖರೀದಿಸಲು ತಾಲ್ಲೂಕುವಾರು ನೋಂದಣಿ ಮತ್ತು ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾಹಿತಿ ನೀಡಿದರು.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ಜೋಳ ಖರೀದಿಗೆ ಸಂಬಂಧಿಸಿದಂತೆ ರೈತರ ನೋಂದಣಿ ಕಾರ್ಯವನ್ನು ನ.15 ರಿಂದ ಪ್ರಾರಂಭಿಸಲಾಗುತ್ತದೆ. ಹಾಗೆಯೇ ಜ1,2025 ರಿಂದ ಮಾ.31, 2025ರ ಅವಧಿವರೆಗೆ ಆಹಾರ ಧಾನ್ಯಗಳ ಖರೀದಿ ಕಾರ್ಯವನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ರೈತರು ಕೃಷಿ ಇಲಾಖೆಯವರು ಸಿದ್ದಪಡಿಸಿದ ಫ್ರೂಟ್ಸ್ ಎಂಬ ತಂತ್ರಾಂಶದಲ್ಲಿ ನಮೂದಿಸಿರುವ ಬೆಳೆಯ ಆಧಾರದ ಮೇಲೆ ರೈತರ ಹೆಸರನ್ನು ನೊಂದಾಯಿಸಿಕೊಳ್ಳಲಾಗುವುದು. ಒಂದು ವೇಳೆ ಫ್ರೂಟ್ಸ್ ತಂತ್ರಾಂಶದಲ್ಲಿ ತೊಂದರೆಯಿದ್ದಲ್ಲಿ ಹತ್ತಿರವಿರುವ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ತಂತ್ರಾಂಶದಲ್ಲಿ ಸರಿಪಡಿಸಿಕೊಂಡು ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಖರೀದಿ ಕೇಂದ್ರಗಳ ಹೆಸರು ಮತ್ತು ಮೊಬೈಲ್ ಸಂಖ್ಯೆಗಳ ವಿವರ :
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಸಗಟು ಮಳಿಗೆ ಎ.ಪಿ.ಎಂ.ಸಿ ಯಾರ್ಡ್ ಔರಾದ್ (ಬಿ) (ಮೊ.9535795880), ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಸಗಟು ಮಳಿಗೆ ಇಂಡಸ್ಟ್ರಿಯಲ್ ಏರಿಯಾ ಬಸವಕಲ್ಯಾಣ ( ಮೊ.9743430353), ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಸಗಟು ಮಳಿಗೆ ಎ.ಪಿ.ಎಂ.ಸಿ ಯಾರ್ಡ್ ಭಾಲ್ಕಿ (ಮೊ. 6366613957), ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮೈಲೂರು ಬೀದರ (ಮೊ. 6366613957) ಹಾಗೂ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಸಗಟು ಮಳಿಗೆ ಆರ್.ಟಿ.ಓ ಚೆಕ್ ಪೊಸ್ಟ್ ಹತ್ತಿರ ಹುಮನಾಬಾದ್ (ಮೊ. 8884563795)