ಬೀದರ್ | ಎ.7 ರಂದು ಫೋನ್ ಇನ್ ಕಾರ್ಯಕ್ರಮ
Update: 2025-04-04 20:36 IST

ಬೀದರ್ : ಸಾರ್ವಜನಿಕ ಪ್ರಯಾಣಿಕರಿಗೆ ಮತ್ತು ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದಲ್ಲಾಗುತ್ತಿರುವ ಸಮಸ್ಯೆಗಳನ್ನು ಆಲಿಸುವ ಹಾಗೂ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಎ.7 ರಂದು ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದು ಮಧ್ಯಾಹ್ನ 3:30 ರಿಂದ 5:30 ರವರೆಗೆ ಫೋನ್ ಇನ್ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಬಸ್ಸಿನ ಸಾರಿಗೆ ಸೌಲಭ್ಯದ ಕೊರತೆ ಕಂಡುಬಂದಲ್ಲಿ ದೂರವಾಣಿ ಸಂಖ್ಯೆ: 77609 92200, 77609 92202 ಗೆ ಕರೆ ಮಾಡಿ ಮನವಿ, ಸಮಸ್ಯೆ ಹಾಗೂ ಸಲಹೆಗಳು ನೀಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.