ಬೀದರ್ | ಫೆ.3 ರಂದು ಫೋನ್ ಇನ್ ಕಾರ್ಯಕ್ರಮ
Update: 2025-02-01 18:39 IST

ಬೀದರ್ : ಪ್ರಯಾಣಿಕರಿಗೆ ಮತ್ತು ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಆಲಿಸುವ ಸಂಬಂಧವಾಗಿ ಫೆ.3 ರಂದು ಮಧ್ಯಾಹ್ನ 3:30 ಗಂಟೆಯಿಂದ 5:30 ಗಂಟೆಯವರೆಗೆ ಫೋನ್-ಇನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೀದರ್ ವಿಭಾಗದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಈ ಫೋನ್ ಇನ್ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಪ್ರಯಾಣಿಕರು ಮತ್ತು ಶಾಲಾ, ಕಾಲೇಜು ವಿದ್ಯಾರ್ಥಿಗಳು ಸಾರಿಗೆ ಸೌಲಭ್ಯದ ಕೊರತೆ ಕಂಡುಬಂದಲ್ಲಿ ದೂರವಾಣಿ ಸಂಖ್ಯೆ: 77609 92200, 77609 92202 ಗೆ ಕರೆ ಮಾಡಿ ಮನವಿ, ಸಮಸ್ಯೆ ಹಾಗೂ ಸಲಹೆಗಳನ್ನು ನೀಡಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.