ಬೀದರ್ | ಅಮಿತ್ ಶಾ ಅವರನ್ನು ದೇಶದಿಂದ ಗಡಿಪಾರು ಮಾಡಲು ಪ್ರಜಾ ಪ್ರಭುತ್ವ ಸಮಿತಿ ಆಗ್ರಹ

Update: 2024-12-19 13:33 GMT

ಬೀದರ್ : ಕೇಂದ್ರ ಗ್ರಹ ಸಚಿವ ಅಮಿತ್ ಶಾ ರನ್ನು ದೇಶದಿಂದ ಗಡಿಪಾರು ಮಾಡುವಂತೆ ಪ್ರಜಾ ಪ್ರಭುತ್ವ ಸಮಿತಿ ಆಗ್ರಹಿಸಿದೆ.

ಭಾಲ್ಕಿಯ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಯವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯ ಸಭೆಯಲ್ಲಿ ಸಂವಿಧಾನದ ಬಗ್ಗೆ ಮಾತನಾಡುವ ವೇಳೆ ಡಾ.ಅಂಬೇಡ್ಕರ್ ಅವರನ್ನು ಅವಮಾನ ಮಾಡಿದ್ದಾರೆ. ಇದರಿಂದಾಗಿ ದೇಶದ ಬಹುಸಂಖ್ಯಾತ ಜನರ ಭಾವನೆಗೆ ಧಕ್ಕೆ ಉಂಟಾಗಿದೆ. ಅವರು ಬಾಬಾಸಾಹೇಬರನ್ನು ಅವಮಾನ ಮಾಡಿದ್ದು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ತಿಳಿಸಲಾಗಿದೆ.

ರಾಷ್ಟ್ರಪತಿಯವರು ಅಮಿತ್ ಶಾ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ಕೈ ಬಿಟ್ಟು, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಹಾಗೆಯೇ ಅವರನ್ನು ಭಾರತ ದೇಶದಿಂದ ಗಡಿಪಾರು ಮಾಡಬೇಕು. ಇಲ್ಲದಿದ್ದರೆ ಅಂಬೇಡ್ಕರ್ ಅಭಿಮಾನಿಗಳು ದೇಶಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.

ಈ ಸಂದರ್ಭದಲ್ಲಿ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಗಗನ ಫುಲೆ, ಸದಸ್ಯ ಆಕಾಶ್ ಸಿಂಧೆ, ಕಲ್ಲಪ್ಪಾ ಮರೂರ್, ಅಶೋಕ್ ರತ್ನಾಕರ್, ತುಕರಾಮ್ ಭಾವಿದೊಡ್ಡಿ, ಜೈ ಭೀಮ್ ಭಾಯಿದೊಡ್ಡಿ, ಮಿಲಿಂದ ಮುಳೆ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News