ಬೀದರ್ | ವಕೀಲ ಸದಾಶಿವ ರೆಡ್ಡಿ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ಬೀದರ್ : ಭಾರತೀಯ ವಕೀಲರ ಪರಿಷತ್ತಿನ ಸಹ ಅಧ್ಯಕ್ಷ, ಹಿರಿಯ ವಕೀಲ ಸದಾಶಿವ ರೆಡ್ಡಿ ಅವರ ಮೇಲೆ ಅಪರಿಚಿತರು ನಡೆಸಿದ ಹಲ್ಲೆಯನ್ನು ಖಂಡಿಸಿ ಇಂದು (ಎ.21)ರಂದು ನಗರದಲ್ಲಿ ಜಿಲ್ಲಾ ವಕೀಲರ ಸಂಘವು ಪ್ರತಿಭಟನೆ ನಡೆಸಿತು.
ಇಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಸದಾಶಿವ ರೆಡ್ಡಿ ಅವರು ತಮ್ಮ ಕಚೇರಿಯಲ್ಲಿ ತಮ್ಮ ಸಹದ್ಯೋಗಿಯೊಂದಿಗೆ ಕೆಲಸ ಮಾಡುತ್ತಿರುವಾಗ ಇಬ್ಬರು ಅಪರಿಚಿತರು ಬಂದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಅಮಾನವೀಯತೆಯ ಘಟನೆಯನ್ನು ನಮ್ಮ ಸಂಘಟನೆಯು ಖಂಡಿಸುತ್ತದೆ. ಹಾಗೆಯೇ ಆರೋಪಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಜಿಲ್ಲಾಧ್ಯಕ್ಷ ಶಿವಶರಣಪ್ಪ ಪಾಟೀಲ್, ಉಪಾಧ್ಯಕ್ಷ ಗುಂಡರೆಡ್ಡಿ, ಜಂಟಿ ಕಾರ್ಯದರ್ಶಿ ಶಿಲ್ಪಾ ಪಾಟೀಲ್, ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಬಿರಾದಾರ್ ಹಾಗೂ ಖಜಾಂಚಿ ಪ್ಯಾರುಸಾಬ್ ಶೇಕ್ ಸೇರಿದಂತೆ ಇತರರು ಇದ್ದರು.