ಬೀದರ್ | ಸಚಿನ್ ಪಾಂಚಾಳ ಆತ್ಮಹತ್ಯೆ ಬಗ್ಗೆ ಸೂಕ್ತ ತನಿಖೆ ನಡೆಸಲು ಒತ್ತಾಯಿಸಿ ಪ್ರತಿಭಟನೆ

Update: 2024-12-31 10:38 GMT

ಬೀದರ್ : ಸಚಿನ್ ಪಾಂಚಾಳ ಅವರ ಆತ್ಮಹತ್ಯೆ ಬಗ್ಗೆ ಸೂಕ್ತ ತನಿಖೆ ನಡೆಸಿ ಅವರ ಕುಟುಂಬಕ್ಕೆ ಪರಿಹಾರ ಒದಗಿಸಿಕೊಡಬೇಕು ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾವು ಒತ್ತಾಯಿಸಿ ಪ್ರತಿಭಟನೆ ನಡೆಸಿದೆ.

ಇಂದು ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಯವರ ಮೂಲಕ ಗೃಹ ಸಚಿವರಿಗೆ ಮನವಿಪತ್ರ ಸಲ್ಲಿಸಿದರು.

ಪ್ರತಿಭಟನೆ ವೇಳೆ ಸುಲೇಪೇಟದ ವಿಶ್ವಕರ್ಮ ಏಕದಂಡಿಗ ಮಠದ ದೊಡ್ಡೆಂದ್ರ ಸ್ವಾಮಿ ಮಾತನಾಡಿ, ಘಟನೆ ಸಂಭವಿಸಿ ನಾಲ್ಕು ದಿನದ ತನಿಖೆ ನೋಡಿದರೆ ಸಂಶಯ ಮೂಡುತ್ತಿದೆ. ಹಾಗಾಗಿ ಸರ್ಕಾರ ಸಿಐಡಿ ಬದಲು ಸಿಬಿಐಗೆ ಒಪ್ಪಿಸಬೇಕು. ಅದೇನೆ ಆಗಲಿ ನಿಷ್ಪಕ್ಷವಾಗಿ ತನಿಖೆ ನಡೆಸಬೇಕು. ಸಚಿನ್ ಅವರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಒದಗಿಸಿ, ಆ ಕುಟುಂಬದ ಇಬ್ಬರು ಸದಸ್ಯರಿಗೆ ಸರಕಾರಿ ಹುದ್ದೆ ನೀಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ದತ್ತಾತ್ರಿ ವಿಶ್ವಕರ್ಮ, ಉಪಾಧ್ಯಕ್ಷ ಕೃಷ್ಣಮ್ ಚಾರಿ, ಪ್ರಧಾನ ಕಾರ್ಯದರ್ಶಿ ರಾಜಕುಮಾರ್ ಪಾಂಚಾಳ್, ಯುವ ಘಟಕ ಜಿಲ್ಲಾಧ್ಯಕ್ಷ ಪ್ರಶಾಂತ್ ವಿಶ್ವಕರ್ಮ ಹಾಗೂ ಯುವ ಘಟಕ ಉಪಾಧ್ಯಕ್ಷ ಸೋಮನಾಥ್ ಪಾಟೀಲ್ ಸೇರಿದಂತೆ ವಿಶ್ವಕರ್ಮ ಸಮುದಾಯದ ಅನೇಕರು ಭಾಗವಹಿಸಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News