ಬೀದರ್ | ಅಮಿತ್ ಶಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಒತ್ತಾಯಿಸಿ ಪ್ರತಿಭಟನೆ

Update: 2024-12-24 10:53 GMT

ಬೀದರ್ : ಡಾ.ಅಂಬೇಡ್ಕರ್ ಅವರನ್ನು ಅವಮಾಣಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ವಜಾಗೊಳಿಸಿ ಅವರ ವಿರುದ್ಧ ದೇಶದ್ರೋಹಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ, ಮಾನವ ಸರಪಳಿ ನಿರ್ಮಿಸಿ, ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್ ವಾದಿಗಳ ಹೋರಾಟ ಸಮಿತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ನಗರದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಜನ ಸೇರಿ ಮಾನವ ಸರಪಳಿ ನಿರ್ಮಿಸಿ, ಅಮಿತ್ ಶಾ ಮತ್ತು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟಿಸಿದರು.

ಅಮಿತ್ ಶಾ ಅವರು ಸಂವಿಧಾನಿಕ ಹುದ್ದೆಯಲ್ಲಿದ್ದು, ಡಿ.18ರಂದು ರಾಜ್ಯಸಭೆಯಲ್ಲಿ ಸಂವಿಧಾನದ 75ನೇ ವರ್ಷದ ಆಚರಣೆಯ ಚರ್ಚೆಯ ಸಂದರ್ಭದಲ್ಲಿ ಡಾ. ಅಂಬೇಡ್ಕರ್ ಅವರ ಬಗ್ಗೆ ಅವಮಾನಿಸುವ ರೀತಿಯಲ್ಲಿ ಮಾತನಾಡಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಮಿತ್ ಶಾ ಅವರು ಸಂವಿಧಾನದ ಮೇಲೆ ಪ್ರಮಾಣ ವಚನ ಸ್ವೀಕರಿಸಿ, ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಬಗ್ಗೆ ನಗಣ್ಯ ರೀತಿಯಲ್ಲಿ ವ್ಯಾಖ್ಯಾನಿಸಿ ಮಾತನಾಡಿರುವುದು ಜಗತ್ತಿನ ಎಲ್ಲಾ ಪ್ರಜಾಪ್ರಭುತ್ವವಾದಿ ಮತ್ತು ಅಂಬೇಡ್ಕರ್ ಅಭಿಮಾನಿಗಳಿಗೆ ಮಾನಸಿಕವಾಗಿ ಬಹಳ ನೋವುಂಟಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ದೇಶದ್ರೋಹ ಕರ್ತವ್ಯ ಎಸಗಿರುವ ಅಮಿತ್ ಶಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ, ಅವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿ ಬಂಧಿಸುವಂತೆ ಪ್ರತಿಭಟನೆಯಲ್ಲಿ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರಾದ ರಾಜಕುಮಾರ್ ಮೂಲಭಾರತಿ, ಚಂದ್ರಕಾಂತ್ ನಿರಾಟೆ, ಕಲ್ಯಾಣರಾವ್ ಭೋಸ್ಲೆ, ಅಧ್ಯಕ್ಷ ಉಮೇಶ್ ಸ್ವಾರಳ್ಳಿಕರ್, ಮಹೇಶ್ ಗೊರನಾಳಕರ್, ವಿಠಲದಾಸ್ ಪ್ಯಾಗೆ, ಬಾಬುರಾವ್ ಹೊನ್ನಾ, ವಿಷ್ಣುವರ್ಧನ್ ವಾಲ್ದೊಡ್ಡಿ, ಅಂಬ್ರೆಷ್ ಕುದುರೆ, ರಾಜಕುಮಾರ್ ಡೋಂಗ್ರೆ, ಸಂಜಯ್ ಭೋಸ್ಲೆ, ರಾಜಕುಮಾರ್ ಗುನ್ನಳ್ಳಿ, ಸಂಜುಕುಮಾರ್ ಮೇತ್ರೆ, ಶಫಿವುಲ್ಲಾ ಬೇಗ್, ಹರ್ಷಿತ್ ದಾಂಡೇಕರ್, ಮುನ್ನಾ ಹಾಗೂ ಅನೇಕ ಜನ ಮಹಿಳೆಯರು ಸೇರಿದಂತೆ ನೂರಾರು ಜನ ಭಾಗವಹಿಸಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News