ಬೀದರ್ | ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ; ರಾಜು ಕಪನೂರ್ ಸೇರಿ ಐವರ ಬಂಧನ

Update: 2025-01-10 13:27 GMT

ಬೀದರ್ : ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ರಾಜು ಕಪನೂರ್ ಸೇರಿ ಐವರ ಬಂಧನವಾಗಿದೆ.

ರಾಜು ಕಪನೂರ್, ಗೊರಕನಾಥ್, ನಂದಕುಮಾರ್ ನಾಗಭುಜಂಗೆ, ರಾಮನಗೌಡ ಪಾಟೀಲ್ ಹಾಗೂ ಸತೀಶ್ ಅವರನ್ನು ಬಂಧಿಸಿ ಆರೋಗ್ಯ ತಪಾಸಣೆಗಾಗಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಸಚಿನ್ ಪಾಂಚಾಳ್ ಡೆತ್ ನೋಟ್ ಬರೆದಿಟ್ಟು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು, ಈ ಪ್ರಕರಣವನ್ನು ಸಿಐಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದ ಹಿನ್ನಲೆಯಲ್ಲಿ ಜ.6ರಂದು ತನಿಖಾ ತಂಡವಾದ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಐವರು ಆರೋಪಿಗಳಿಗೆ ನೋಟಿಸ್ ನೀಡಿದ್ದರು. ವಿಚಾರಣೆಗೆ ಆಗಮಿಸಿದ ಐವರನ್ನು ಇಂದು ಬಂಧಿಸಲಾಗಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News