ಬೀದರ್ : ಶಾಲಾ ವಾಹನ-ಬೈಕ್ ಢಿಕ್ಕಿ; ಸವಾರ ಮೃತ್ಯು
Update: 2025-03-13 10:30 IST

ಬೀದರ್ : ಶಾಲಾ ವಾಹನವೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಲಸೂರ್ ಪೊಲೀಸ್ ಠಾಣೆ ವ್ಯಾಪ್ತಿಯ ಮೀರಖಲ್ ಗ್ರಾಮದ ಬಳಿ ನಡೆದಿದೆ.
ಮೀರಖಲ್ ತಾಂಡಾದ ನಿವಾಸಿ ದೀಪಕ್ ರಾಠೋಡ (31) ಮೃತಪಟ್ಟ ಬೈಕ್ ಸವಾರ.
ಬುಧವಾರ ರಾತ್ರಿ ಸುಮಾರು 9 ಗಂಟೆಗೆ ದೀಪಕ್ ಮೀರಖಲ್ ತಾಂಡಾದಿಂದ ಬರುತ್ತಿರುವಾಗ ಎದುರಿನಿಂದ ಬಂದ ಶಾಲಾ ವಾಹನ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯ ಸುದ್ದಿ ತಿಳಿದ ಹುಲಸೂರ್ ಠಾಣೆಯ ಪಿಎಸ್ಐ ಶಿವಪ್ಪ ಮೇಟಿ ನೇತೃತ್ವದ ಪೊಲೀಸರ ತಂಡ ಸ್ಥಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಕುರಿತು ಹುಲಸೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.