ಬೀದರ್ | ಅಪಘಾತದಲ್ಲಿ ಗಾಯಗೊಂಡ ಬಾಲಕ ಚಿಕಿತ್ಸೆ ಫಲಿಸದೆ ಮೃತ್ಯು
Update: 2024-12-04 15:09 GMT
ಬೀದರ್ : ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿರುವ ಘಟನೆ ನಡೆದಿದೆ.
ಔರಾದ್ ತಾಲೂಕಿನ ಜೀರ್ಗಾ(ಬಿ) ಗ್ರಾಮದ 9ನೇ ತರಗತಿ ವಿದ್ಯಾರ್ಥಿ ವಿಕಾಸ ಸೋಪಾನ (14) ಮೃತಪಟ್ಟಿರುವ ಯವಕ ಎಂದು ತಿಳಿದುಬಂದಿದೆ.
ಬೀದರ್ - ಔರಾದ್ ರಾಷ್ಟ್ರೀಯ ಹೆದ್ದಾರಿ ‘161ಎ’ ಯಲ್ಲಿ ಜೀರ್ಗಾ(ಬಿ) ಗ್ರಾಮದ ಬಳಿ ರಸ್ತೆ ದಾಟುತ್ತಿದ್ದ ವೇಳೆ ವಿದ್ಯಾರ್ಥಿಗೆ ಔರಾದ ಕಡೆಯಿಂದ ವೇಗವಾಗಿ ಚಲಿಸುತ್ತಿದ್ದ ಕಾರು ಹೊಡೆದು ತೀವ್ರವಾಗಿ ಗಾಯಗೊಂಡಿದ್ದರು.
ತಕ್ಷಣ ವಿದ್ಯಾರ್ಥಿಯನ್ನು ಚಿಕಿತ್ಸೆಗಾಗಿ ಬೀದರ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮಧ್ಯಾಹ್ನ ಸಾವನಪ್ಪಿದ್ದಾನೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಸಂತಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ ಎಂದು ತಿಳಿದುಬಂದಿದೆ.