ಬೀದರ್ | ಅಪರಿಚಿತ ವಾಹನ ಢಿಕ್ಕಿ: ಮಹಿಳೆ ಮೃತ್ಯು

Update: 2025-02-05 10:19 IST
Photo of Accident
  • whatsapp icon

ಬೀದರ್ : ವಾಹನವೊಂದು ವೇಗವಾಗಿ ಬಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬಳು ಮೃತಪಟ್ಟ ಘಟನೆ ಹುಮನಾಬಾದ್ ತಾಲೂಕಿನ ಹಂದಿಕೇರಾ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಹಾಲ್ ಗೋರ್ಟಾ ಗ್ರಾಮದ ನಿವಾಸಿ ಸರಿತಾ ಮೃತಪಟ್ಟವರು.

ಸರಿತಾ ಮಂಗಳವಾರ ಬಹಿರ್ದೆಸೆಗೆಂದು ಹೊರಗಡೆ ಹೋದಾಗ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಹೋದ ಪರಿಣಾಮ ಅವರು ಸ್ಥಳದಲ್ಲೇ ಕೊನೆಯುಸಿರೆಳೆದರೆಂದು ಎಂದು ತಿಳಿದು ಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಹುಮ್ನಾಬಾದ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News