ಬೀದರ್ | ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಹತ್ಯೆ
Update: 2025-04-23 17:35 IST

ಗಂಗಶೆಟ್ಟಿ
ಬೀದರ್ : ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನೊರ್ವನ ಹತ್ಯೆ ಮಾಡಿದ ಘಟನೆ ಮಂಗಳವಾರ ರಾತ್ರಿ ಕಮಲನಗರ ತಾಲ್ಲೂಕಿನ ಚಾಂಡೇಶ್ವರ್ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಗಂಗಶೆಟ್ಟಿ (26) ಎಂದು ಗುರುತಿಸಲಾಗಿದೆ.
ಮಂಗಳವಾರ ರಾತ್ರಿ ಚಾಂಡೇಶ್ವರ್ ಗ್ರಾಮದ ಹೊರವಲಯದಲ್ಲಿ ಗಂಗಶೆಟ್ಟಿ ಎಂಬ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ಘಟನೆಗೆ ಕಾರಣ ಇನ್ನು ತಿಳಿದು ಬಂದಿಲ್ಲ ಎನ್ನಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಕಮಲನಗರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.