ಮಕ್ಕಳು ಪಾಠದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆ, ಕ್ರೀಡೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು : ಈಶ್ವರ್ ಖಂಡ್ರೆ

Update: 2025-01-23 20:46 IST
ಮಕ್ಕಳು ಪಾಠದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆ, ಕ್ರೀಡೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು : ಈಶ್ವರ್ ಖಂಡ್ರೆ
  • whatsapp icon

ಬೀದರ್ : ಮಕ್ಕಳು ಪಾಠದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆ, ಕ್ರೀಡೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ಅವರು ಇಂದು ಬೀದರನ ಇಂದಿರಾಬಾಯಿ ಗುರುತ್ತಪ್ಪ ಶೇಟಕಾರ್ ಪ್ರೌಢ ಶಾಲೆಯಲ್ಲಿ ಜಿಲ್ಲಾ ಪಂಚಾಯತ್ ಮತ್ತು ಶಾಲಾ ಶಿಕ್ಷಣ ಇಲಾಖೆ ಅವರ ಸಹಭಾಗಿತ್ವದಲ್ಲಿ ಹಮ್ಮಿಕೊಂಡಿದ್ದ 2024-25ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕರು ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಅವರಿಗೆ ಪ್ರೋತ್ಸಾಹಿಸಬೇಕು. ಪ್ರಶಸ್ತಿ ಗೆಲ್ಲುವುದಕ್ಕಿಂತ ಎಲ್ಲದರಲ್ಲೂ ಭಾಗವಹಿಸುವುದು ಬಹಳ ಮುಖ್ಯವಾಗಿದೆ. ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೆ ಪ್ರತಿಭಾ ಕಾರಂಜಿ ಒಂದು ಉತ್ತಮ ವೇದಿಕೆಯಾಗಿದೆ. ಇಲ್ಲಿ ಜಯಗಳಿಸಿ ಮುಂದೆ ರಾಜ್ಯ ಮಟ್ಟದಲ್ಲಿ ಭಾಗವಹಿಸಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಶುಭ ಹಾರೈಸಿದ ಅವರು, ಮಕ್ಕಳು ಈ ದೇಶದ ನಿಜವಾದ ಸಂಪತ್ತು. ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಮತ್ತು ದೇಶ ಮುನ್ನಡೆಸುವವರಾಗಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಪೂಜ್ಯ ಶ್ರೀ ಡಾ. ಶಿವುಕುಮಾರ್ ಮಹಾಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನಿರ್ದೇಶಕ ಪ್ರಸನ್ನ ಕುಮಾರ್, ಬೀದರ ಶಾಲಾ ಶಿಕ್ಷಣ ಇಲಾಖೆಯ ಪ್ರಭಾರಿ ಶಿಕ್ಷಣಾಧಿಕಾರಿ ಬಸವಂತರಾಯ ಜಿಡ್ಡೆ ಹಾಗೂ ಬೀದರ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್.ದೊಡ್ಡೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News