ಬೀದರ್ - ಬೆಂಗಳೂರು ನಡುವೆ ವಿಮಾನಯಾನ ಪುನರಾರಂಭ ಮಾಡಿದ ಸಿಎಂ ಸಿದ್ದರಾಮಯ್ಯ

ಬೀದರ್ : ಬೀದರ್ ಮತ್ತು ಬೆಂಗಳೂರು ನಡುವಿನ ಸ್ಥಗಿತಗೊಂಡಿದ್ದ ವಿಮಾನಯಾನವನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರಾರಂಭ ಮಾಡಿದರು.
ಕೇಕ್ ಕತ್ತರಿಸಿ ವಿಮಾನಯಾನd ಪುನರಾರಂಭಕ್ಕೆ ಚಾಲನೆ ನೀಡಿದ ಅವರು, ಎ.17 ರಂದು ಬೀದರ್ ನಿಂದ ಬೆಂಗಳೂರಿಗೆ ತೆರಳುವ ಐವರು ಪ್ರಯಾಣಿಕರನ್ನು ಬೋರ್ಡಿಂಗ್ ಪಾಸ್ ವಿತರಿಸುವ ಮೂಲಕ ಹಸಿರು ನಿಶಾನೆ ತೋರಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಮಾತನಾಡಿ, ಕೇಂದ್ರ ಸರ್ಕಾರ ಸಹಾಯ ಧನ ಸ್ಥಗಿತಗೊಳಿಸಿದ್ದರಿಂದ ವಿಮಾನಯಾನವು ಸ್ಥಗಿತಗೊಂದಿತ್ತು. ಆ ಡಬಲ್ ಎಂಜಿನ್ ಸರ್ಕಾರದಿಂದ ಯಾವ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ಇದೀಗ ನಮ್ಮ ಸರ್ಕಾರ ವಿಮಾನ ಸೇವೆ ಪುನರ್ ಆರಂಭ ಮಾಡಿದೆ. ಇದರಿಂದಾಗಿ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ 14 ಕೋಟಿ ರೂ. ಮಿಸಲಿಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಸಂಸದ ಸಾಗರ್ ಖಂಡ್ರೆ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ್ ಪಾಟೀಲ್, ಭೀಮರಾವ್ ಪಾಟೀಲ್, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.