ಡಾ.ಅಂಬೇಡ್ಕರ್ ಅವರು ಭವ್ಯ ಭಾರತದ ಪ್ರಜೆಗಳ ನಾಯಕ : ಸಚಿವ ಈಶ್ವರ್ ಖಂಡ್ರೆ

Update: 2025-04-14 17:01 IST
ಡಾ.ಅಂಬೇಡ್ಕರ್ ಅವರು ಭವ್ಯ ಭಾರತದ ಪ್ರಜೆಗಳ ನಾಯಕ : ಸಚಿವ ಈಶ್ವರ್ ಖಂಡ್ರೆ
  • whatsapp icon

ಬೀದರ್ : ಅಂಬೇಡ್ಕರ್ ಅವರು ಕೇವಲ ದಲಿತ, ಹಿಂದುಳಿದ ವರ್ಗಗಳ ನಾಯಕ ಮಾತ್ರವಲ್ಲ, ಇವರು ಭವ್ಯ ಭಾರತದ ಪ್ರಜೆಗಳ ನಾಯಕ. ತನ್ನ ಇಡೀ ಜೀವನವನ್ನು ದೇಶದ ಭವ್ಯ ಭವಿಷ್ಯದ ನಿರ್ಮಾಣಕ್ಕಾಗಿ, ಸಮ ಸಮಾಜದ ನಿರ್ಮಾಣಕ್ಕಾಗಿ ಮುಡಿಪಾಗಿಟ್ಟವರು ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಹೇಳಿದರು.

ಇಂದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ 134ನೇ ಜಯಂತ್ಯೋತ್ಸವ ನಿಮಿತ್ಯ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಮೂರ್ತಿಗೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಹಿಂದುಳಿದ ವರ್ಗ, ದೀನ ದಲಿತರಿಗೆ ವಿಶೇಷ ಸವಲತ್ತುಗಳು ನೀಡುವ ಮತ್ತು ಶೈಕ್ಷಣಿಕ ಕ್ರಾಂತಿಯ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರಲು ಅಡಿಪಾಯ ಹಾಕಿದರು. ಸಮಾನ ನಾಗರಿಕ ಹಕ್ಕುಗಳು ಮತ್ತು ಕಾನೂನಾತ್ಮಕ ಹೋರಾಟ ಮಾಡಲು ಎಲ್ಲಾ ದುರ್ಬಲ ವರ್ಗದವರಿಗೆ ಅವಕಾಶ ಕಲ್ಪಿಸಿದರು ಎಂದು ತಿಳಿಸಿದರು.

ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್ ಅವರು ಮಾತನಾಡಿ, ಇಂದಿನ ಯುವಪೀಳಿಗೆ ಅಂಬೇಡ್ಕರ್ ಅವರ ಆದರ್ಶ, ವಿಚಾರಧಾರಣೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಬಂಡೆಪ್ಪ ಕಾಶಂಪೂರೆ, ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ್ ಅರಳಿ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಗಿರೀಶ್ ಬದೋಲೆ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ನಗರಸಭೆ ಅಧ್ಯಕ್ಷ ಮಹಮ್ಮದ್ ಗೌಸ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ್ ಜಾಬಶೆಟ್ಟಿ, ಈಶ್ವರಸಿಂಗ್ ಠಾಕೂರ್, ಮಾರುತಿ ಬೌದ್ಧೆ, ಅನೀಲ್ ಬೆಲ್ದಾರ್, ಆನಂದ್ ದೇವಪ್ಪ, ಪಂಡಿತರಾವ್ ಚಿದ್ರಿ, ಬಸವರಾಜ್ ಮಾಳಗೆ ಹಾಗೂ ದೇವೆಂದ್ರ ಚಿದ್ರಿ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News