ಬೀದರ್: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಜ್ಞಾನಸುಧಾ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

ಬೀದರ್ : ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ಲಭಿಸಿದ್ದು, ವಿಜ್ಞಾನ ವಿಭಾಗದಲ್ಲಿ ಶೇ. 99.44, ಕಲಾವಿಭಾಗದಲ್ಲಿ ಶೇ.97 ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ.98.ಫಲಿತಾಂಶ ಬಂದಿದೆ. ಒಟ್ಟು 75 ವಿದ್ಯಾರ್ಥಿಗಳು ಅಗ್ರ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಸಾಧನೆ ಮಾಡಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಆರವ್ ತಂದೆ ಸಂಜಯ್ ದೇಶಮುಖ್ ಶೇ. 97.16 ಪ್ರತಿಶತ ಫಲಿತಾಂಶ ಪಡೆದು ಬೀದರ್ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ನೀಲಭ ತಂದೆ ರಾಜೇಶ್ ಕುಮಾರ್ ದುಬೆ ಶೇ. 94.5 ಅಂಕ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ಬಲರಾಮ್ ತಂದೆ ಜಗನ್ನಾಥ ಶೇ. 95% ಪ್ರತಿಶತ ಫಲಿತಾಂಶ ಪಡೆದಿದ್ದಾರೆ.
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜ್ಞಾನಸುಧಾ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ಲಭಿಸಿದ್ದಕ್ಕೆ, ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಪೂರ್ಣಿಮಾ ಜಾರ್ಜ್, ನಿರ್ದೇಶಕ ಮುನೇಶ್ವರ್ ಲಾಖಾ, ಪ್ರಾಂಶುಪಾಲ ಚೆನ್ನವೀರ್ ಪಾಟೀಲ್, ವಿಜ್ಞಾನ ವಿಭಾಗದ ಶೈಕ್ಷಣಿಕ ನಿರ್ದೇಶಕ ಶ್ರೀಕಾಂತ್ ರೆಡ್ಡಿ ಹಾಗೂ ಸುಜಾತ ಬೊಮ್ಮಾರೆಡ್ಡಿ ಸೇರಿದಂತೆ ಉಪನ್ಯಾಸಕ ವೃಂದ ಹರ್ಷ ವ್ಯಕ್ತಪಡಿಸಿದ್ದಾರೆ.