ಹುಮ್ನಾಬಾದ್ | 1.5 ಲಕ್ಷ ರೂ. ಮೌಲ್ಯದ ಗಾಂಜಾ ವಶ, ಒಬ್ಬನ ಬಂಧನ
ಬೀದರ್: ಹುಮ್ನಾಬಾದ್ ತಾಲೂಕಿನ ಮೀನಕೇರಾ ಗ್ರಾಮದಲ್ಲಿ ಪೊಲೀಸರು ದಾಳಿ ನಡೆಸಿ 1.5 ಲಕ್ಷ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದು, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ದಿ.26ರಂದು ಮೀನಕೇರಾ ಗ್ರಾಮದ ಬೊಮ್ಮಗೊಂಡೇಶ್ವರ ವೃತ್ತದ ಹತ್ತಿರ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಆತನಿಂದ 1 ಲಕ್ಷ 50 ಸಾವಿರ ರೂ. ಮೌಲ್ಯದ ಗಾಂಜಾ ಮತ್ತು 800 ರೂ. ಮೌಲ್ಯದ ಒಂದು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿ ವಿರುದ್ಧ ಮನ್ನಾಎಖೇಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸ್ ಅಧೀಕ್ಷಕ ಪ್ರದೀಪ್ ಗುಂಟಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಮಹೇಶ್ ಮೇಘಣ್ಣವರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ-2 ಚಂದ್ರಕಾಂತ್ ಪೂಜಾರಿ, ಪೊಲೀಸ್ ಉಪಾಧೀಕ್ಷಕರು ಹುಮನಾಬಾದ್ ಜಿ.ಎಸ್ ನ್ಯಾಮೇಗೌಡರ್, ಸಿಪಿಐ ಶ್ರೀನಿವಾಸ್ ಅಲ್ಲಾಪೂರ್ ಮಾರ್ಗದರ್ಶನದಲ್ಲಿ ಪಿಎಸ್ಸೈ ಮಹೇಂದ್ರಕುಮಾರ್ ಮತ್ತು ಪೊಲೀಸ್ ಸಿಬ್ಬಂದಿ ದಾಳಿ ನಡೆಸಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.