ತೋಟಗಾರಿಕೆ ಇಲಾಖೆಯ ಕಚೇರಿ ಕಟ್ಟಡ ಉದ್ಘಾಟಿಸಿದ ಸಚಿವ ಈಶ್ವರ್ ಖಂಡ್ರೆ

Update: 2025-01-04 11:46 GMT

ಬೀದರ್ : ಭಾಲ್ಕಿ ತಾಲ್ಲೂಕಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ತೋಟಗಾರಿಕೆ ಇಲಾಖೆಯ ಕಚೇರಿ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತೋಟಗಾರಿಕೆ ಕ್ಷೇತ್ರದ ಅಭಿವೃದ್ಧಿ ರೈತರ ಆರ್ಥಿಕ ಪ್ರಗತಿಗೆ ಮಹತ್ವದ ಕಾರಣವಾಗುವುದು. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ತೋಟಗಾರಿಕೆ ಮಾದರಿ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವ ಮೂಲಕ ಸ್ವಾವಲಂಬನೆಯತ್ತ ಹೆಜ್ಜೆಹಾಕಬೇಕು. ಸರ್ಕಾರ ಈ ಮೂಲಕ ರೈತರ ಕೈಗೆ ಪ್ರೋತ್ಸಾಹ ಹಾಗೂ ಬೆಂಬಲ ನೀಡುತ್ತಿದೆ ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ವಿತರಿಸಿದ ಅವರು, ರೈತರು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಉತ್ತಮ ರೀತಿಯಿಂದ ಬೆಳೆ ಬೆಳೆಯಬೇಕು ಎಂದರು

ಈ ನೂತನ ಕಟ್ಟ ಉದ್ಘಾಟನಾ ಸಮಾರಂಭದಲ್ಲಿ ಪುರಸಭೆ ಅಧ್ಯಕ್ಷೆ ಶಶಿಕಲಾ ಸಿಂಧನಕೆರೆ, ಉಪಾಧ್ಯಕ್ಷ ವಿಜಯಕುಮಾರ್ ರಾಜಭವನ್, ತಹಶೀಲ್ದಾರ್ ಮಲ್ಲಿಕಾರ್ಜುನ್ ವಡ್ಡನಕೇರೆ, ತೋಟಗಾರಿಕೆ ಅಧಿಕಾರಿ ಹಾಗೂ ಸಿಬ್ಬಂದಿಗಳ ಜತೆಗೆ ರೈತರು ಭಾಗವಹಿಸಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News