ಎಟಿಎಂ ದರೋಡೆ ಪ್ರಕರಣ: ಗಾಯಾಳು ಶಿವಕುಮಾರ್ ಅವರನ್ನು ಹೈದರಾಬಾದ್ ಆಸ್ಪತ್ರೆಯಲ್ಲಿ ಭೇಟಿಯಾದ ಸಚಿವ ರಹೀಂ ಖಾನ್

Update: 2025-01-23 20:44 IST
ಎಟಿಎಂ ದರೋಡೆ ಪ್ರಕರಣ: ಗಾಯಾಳು ಶಿವಕುಮಾರ್ ಅವರನ್ನು ಹೈದರಾಬಾದ್ ಆಸ್ಪತ್ರೆಯಲ್ಲಿ ಭೇಟಿಯಾದ ಸಚಿವ ರಹೀಂ ಖಾನ್
  • whatsapp icon

ಬೀದರ್ : ಎಟಿಎಂ ದರೋಡೆ ಪ್ರಕರಣದ ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದ ಶಿವಕುಮಾರ್ ಅವರನ್ನು ಪೌರಾಡಳಿತ ಹಾಗೂ ಹಜ್ ಸಚಿವ ರಹಿಂ ಖಾನ್ ಅವರು ಹೈದರಾಬಾದನ ಕೇರ್ ಆಸ್ಪತ್ರೆಯಲ್ಲಿ ಭೇಟಿಯಾಗಿ ಧೈರ್ಯ ತುಂಬಿದರು.

ಇಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಹೈದರಾಬಾದ್‌ ಗೆ ಆಗಮಿಸಿದ ಅವರು, ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ್ ಮತ್ತು ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿ ಆರ್ಥಿಕ ಸಹಾಯ ಮಾಡಿದರು.

ಶಿವಕುಮಾರ್ ಈಗ ಅಪಾಯದಿಂದ ಪಾರಾಗಿದ್ದಾರೆ. ಅವರ ಚಿಕಿತ್ಸಾ ವೆಚ್ಚದ ಬಗ್ಗೆ ಚಿಂತಿಸಬೇಡಿ ಎಂದು ಕುಟುಂಬಸ್ಥರಿಗೆ ಭರವಸೆ ನೀಡಿದ ಅವರು, ಶಿವಕುಮಾರ್ ಅವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಲ್ಲಿ ವಿನಂತಿಸಿ ಅವರ ಆರೋಗ್ಯದ ಬಗ್ಗೆ ವಿವರವಾಗಿ ವಿಚಾರಿಸಿದರು.

ಗಾಯಾಳು ಶಿವಕುಮಾರ್ ಶೀಘ್ರ ಗುಣಮುಖರಾಗುವ ಭರವಸೆಯನ್ನು ವೈದ್ಯರು ನೀಡಿದ್ದಾರೆ. ದುರಂತಕ್ಕೆ ಕಾರಣರಾದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕುಟುಂಬ ಸದಸ್ಯರಿಗೆ ಹೇಳಿದ ಅವರು, ಗಾಯಗೊಂಡ ಮತ್ತು ಮೃತರ ಕುಟುಂಬಗಳಿಗೆ ಸಕಾಲದಲ್ಲಿ ನೆರವು ನೀಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News