ಪ್ರಯಾಗರಾಜ್ ಅಪಘಾತ ಪ್ರಕರಣ : ಗಾಯಾಳುಗಳ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
Update: 2025-02-24 18:40 IST

ಬೀದರ್ : ಉತ್ತರ ಪ್ರದೇಶದ ಪ್ರಯಾಗರಾಜ್ ಗೆ ಪ್ರಯಾಣಿಸುತ್ತಿರುವ ಸಂದರ್ಭದಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಫೆ.21 ರಂದು ನಗರದ ಲಾಡಗೇರಿ ನಿವಾಸಿಗಳು ಪ್ರಯಾಗರಾಜಿಗೆ ಪ್ರಯಾಣಿಸುತ್ತಿರುವ ಸಂದರ್ಭದಲ್ಲಿ ಮಿರ್ಜಾಮುರಾದ್ ಹತ್ತಿರದ ರೂಪಾಪುರ್ ಬಳಿ ಲಾರಿ ಮತ್ತು ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿ 5 ಜನ ಮೃತಪಟ್ಟು, 7 ಜನ ಗಾಯಗೊಂಡಿದ್ದರು. ಗಾಯಾಳುಗಳನ್ನು ಇಂದು ನಗರಕ್ಕೆ ಕರೆ ತಂದು ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಧ್ಯಾನೇಶ್ವರ್ ನಿರಗುಡೆ ಸೇರಿದಂತೆ ಇತರರು ಉಪಸ್ಥಿತರಿದ್ದರು.