ರೆಡ್ಡಿ ಸಮಾಜ ಶಾಂತಿ-ಸಹಬಾಳ್ವೆಯ ಸಂಕೇತವಾಗಿದೆ : ಸಚಿವ ರಹೀಮ್ ಖಾನ್

Update: 2025-01-19 18:57 IST
Photo of Program
  • whatsapp icon

ಬೀದರ್ : ರೆಡ್ಡಿ ಸಮಾಜವು ಶಾಂತಿ, ಸಹಬಾಳ್ವೆಯ ಸಂಕೇತವಾಗಿದೆ. ಈ ಸಮಾಜದ ಜನ ಸರ್ವ ಜನಾಂಗದವರೊಂದಿಗೆ ಪ್ರೀತಿ, ವಾತ್ಸಲ್ಯದಿಂದ ಒಳಗೊಳ್ಳುವ ಪರಿಪಾಠ ಹೊಂದಿದ್ದಾರೆ ಎಂದು ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಮ್ ಖಾನ್ ಹೇಳಿದರು.

ಇಂದು ನಗರದ ಹೇಮ ವೇಮ ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರದಲ್ಲಿ ಆಯೋಜಿಸಿದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಳೆದ ಬಾರಿ ನಾನು ಸಮುದಾಯದ ಅಭಿವೃದ್ಧಿಗಾಗಿ 10 ಲಕ್ಷ ರೂ. ಅನುದಾನ ಘೋಷಣೆ ಮಾಡಿದ್ದೆ. ಆ ಅನುದಾನವನ್ನು15 ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಇತ್ತೀಚಿಗೆ ಕೆಲವರು ರೆಡ್ಡಿ ಸಮಾಜವನ್ನು 3ಎ ಯಿಂದ ಬೇರೆ ವರ್ಗಕ್ಕೆ ಸೇರಿಸುವಂತೆ ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಈ ಮನವಿಯನ್ನು ಪುರಸ್ಕರಿಸದೆ ಯಥಾವತ್ತಾಗಿ ಮುಂದುವರೆಸಬೇಕು ಎಂದು ಸಮಾಜದ ಮುಖಂಡರು ಮನವಿ ಕೂಡ ಮಾಡಿದ್ದಾರೆ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.

ಸಹ ಶಿಕ್ಷಕ ಹಾಗೂ ಹುಮನಾಬಾದ ಮಾಜಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕ ಅಧ್ಯಕ್ಷ ವಿರಂತರೆಡ್ಡಿ ಜಂಪಾ ಮಾತನಾಡಿ, ವೇಮನರು ತಮ್ಮ ಪದ್ಯ ಹಾಗೂ ವಚನಗಳ ಮೂಲಕ ಸಮಾಜದಲ್ಲಿನ ಅಂಕು-ಡೊಂಕುಗಳನ್ನು ತಿದ್ದುವ ಕೆಲಸ ಮಾಡಿದ್ದಾರೆ. ಆಂದ್ರ ಪ್ರದೇಶದ ಕೆಲವು ಸಾಹಿತಿಕಾರರು ಉದ್ದೇಶಪೂರ್ವವಾಗಿ ಇವರ ಇತಿಹಾಸ ಮುಚ್ಚಿಟ್ಟಿದ್ದರು. ನಂತರ ದಿನಗಳಲ್ಲಿ ಸಿ.ಪಿ ಬ್ರೋನ್ ವೇಮನರ ಸಾಹಿತ್ಯವನ್ನು ಇಂಗ್ಲೀಷ್ ಗೆ ಅನುವಾದ ಮಾಡಿದ್ದರಿಂದ ನಮಗೆ ಅವರ ಇತಿಹಾಸ ತಿಳಿಯಲು ಸಾಧ್ಯವಾಯಿತು. ಮುಂದಿನ ದಿನಗಳಲ್ಲಿ ವೇಮನರ ಕುರಿತು ಇನ್ನು ಹೆಚ್ಚಿನ ಸಂಶೋಧನೆಯಾಗಬೇಕು ಎಂದು ಅಭಿಪ್ರಾಯಪಟ್ಟರು.

ಈ ಕಾರ್ಯಕ್ರಮದಲ್ಲಿ ಎನ್.ಬಿ.ರೆಡ್ಡಿ ಸ್ವಾಮಿಜಿ ದಿವ್ಯ ಸಾನಿಧ್ಯ ವಹಿಸಿದರು. ನಗರ ಸಭೆ ಅಧ್ಯಕ್ಷ ಮೊಹಮ್ಮದ್ ಗೌಸ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಜಗನ್ನಾಥ್ ಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ್ ಸಿಂಧೆ, ರೆಡ್ಡಿ ಸಮಾಜದ ಅಧ್ಯಕ್ಷ ಶಂಕರ್ ರೆಡ್ಡಿ ಚಿಟ್ಟಾ, ಕಾರ್ಯದರ್ಶಿ ಗೋಪಾಲರೆಡ್ಡಿ, ಉಪಾಧ್ಯಕ್ಷ ರಾಜರೆಡ್ಡಿ, ರಾಜು ಚಿಂತಾಮಣಿ, ಸಂಗ್ರಾಮ್ ರೆಡ್ಡಿ, ಡಾ.ಶ್ರೀನಿವಾಸ್ ರೆಡ್ಡಿ ಹಾಗೂ ಓಂ ರೆಡ್ಡಿ ಸೇರಿದಂತೆ ಸಮಾಜದ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News