ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣ: ಆರೋಪಿಗಳು ಮತ್ತೆ 3 ದಿನ ಸಿಐಡಿ ಕಸ್ಟಡಿಗೆ

Update: 2025-01-15 15:58 GMT

ಬೀದರ್ : ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯ ಕಾಂಗ್ರೆಸ್ ಮುಖಂಡ ರಾಜು ಕಪನೂರ್ ಸೇರಿ ಐವರನ್ನು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ ನೀಡಿ ಇಂದು ಜೆಎಂಎಫ್ಸಿ ನ್ಯಾಯಾಲಯ ಆದೇಶಿಸಿದೆ.

ಸಚಿನ್ ಪಾಂಚಾಳ ಡಿ.26 ರಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್ ನೋಟ್ ಅಲ್ಲಿ ರಾಜು ಕಪನೂರ್ ಸೇರಿ ಎಂಟು ಜನರ ಹೆಸರು ಉಲ್ಲೇಖವಾಗಿತ್ತು. ಈ ಪ್ರಕರಣ ತನಿಖೆ ನಡೆಸುತ್ತಿರುವ ಸಿಐಡಿ ತಂಡ ಕಪನೂರ್ ಸೇರಿ ಐವರನ್ನು ಜ.10 ರಂದು ಬಂಧನ ಮಾಡಿ ನ್ಯಾಯಾಲಯದ ಎದುರು ಹಾಜರು ಪಡಿಸಿತ್ತು.

ಬಂಧನವಾದ ದಿನವೇ ವಿಚಾರಣೆ ನಡೆಸಿದ ನ್ಯಾಯಾಧೀಶರು ರಾಜು ಕಪನೂರ್, ನಂದಕುಮಾರ್ ನಾಗಭುಜಂಗಿ, ಗೋರಖನಾಥ್, ರಾಮನಗೌಡ ಪಾಟೀಲ್ ಮತ್ತು ಸತೀಶ್ ಅವರನ್ನು ಐದು ದಿನ ಕಸ್ಟಡಿಗೆ ನೀಡಿದ್ದರು.

ಕಸ್ಟಡಿ ಅವಧಿ ಮುಗಿದ ಹಿನ್ನಲೆ ಇಂದು ಐದು ಜನ ಆರೋಪಿಗಳನ್ನು ನ್ಯಾಯಾಲಯದಲ್ಲಿ ಹಾಜರು ಪಡಿಸಿ ಹೆಚ್ಚಿನ ವಿಚಾರಣೆಗಾಗಿ ಮತ್ತೆ 9 ದಿನ ವಶಕ್ಕೆ ನೀಡುವಂತೆ ಸಿಐಡಿ ಪರ ವಕೀಲರು ಮನವಿ ಮಾಡಿದ್ದರು. ಇದಕ್ಕೆ ಕಪನೂರ್ ಪರ ವಕೀಲರು ವಿರೋಧ ವ್ಯಕ್ತಪಡಿಸಿದ್ದರು. ಎರಡು ಕಡೆಯಿಂದ ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಮತ್ತೆ ಮೂರು ದಿನ ಸಿಐಡಿ ಕಸ್ಟಡಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News