ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣ; ಆರೋಪಿಗಳು 5 ದಿನ ಸಿಐಡಿ ವಶಕ್ಕೆ
Update: 2025-01-10 18:44 GMT
ಬೀದರ್ : ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಬಂಧಿತರಾದ ಐದು ಜನ ಆರೋಪಿಗಳನ್ನು ನ್ಯಾಯಾಲಯವು ಐದು ದಿನ ಸಿಐಡಿ ವಶಕ್ಕೆ ಒಪ್ಪಿಸಿದೆ.
ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜು ಕಪನೂರ್, ನಂದಕುಮಾರ್ ನಾಗಭುಜಂಗೆ, ಗೋರಖನಾಥ್, ರಾಮನಗೌಡ ಪಾಟೀಲ್ ಹಾಗೂ ಸತೀಶ್ ಅವರನ್ನು ವಿಚಾರಣೆ ನಡೆಸಿದ ನಂತರ ಬಂಧನ ಮಾಡಿತ್ತು.
ಬಂಧನದ ನಂತರ ಬ್ರಿಮ್ಸ್ ಆಸ್ಪತ್ರೆಯಲ್ಲಿ ಐದು ಆರೋಪಿಗಳ ಆರೋಗ್ಯ ತಪಾಸಣೆ ನಡೆಸಿದ ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ರಾಜು ಕಪನೂರ್ ಸೇರಿ ಇತರ ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಿದ ನ್ಯಾಯದೀಶ ರಾಮಮೂರ್ತಿ ಎನ್. ಅವರು ಪ್ರತಿವಾದ ಆಲಿಸಿದ ನಂತರ ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು 5 ದಿನ ಸಿಐಡಿ ವಶಕ್ಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.