ಕಾರಂಜಾ ಜಲಾಶಯದಿಂದ ನೀರು ಬಿಡುಗಡೆ: ಸಾರ್ವಜನಿಕರು ಎಚ್ಚರವಹಿಸಲು ಸೂಚನೆ
Update: 2025-04-08 14:34 IST

ಬೀದರ್ : ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವುದಕ್ಕಾಗಿ ಕಾರಂಜಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಸಾರ್ವಜನಿಕರು ಎಚ್ಚರವಹಿಸಬೇಕು ಎಂದು ಜಿಲ್ಲಾ ಕ.ನೀ.ನಿ.ನಿ ಕಾರ್ಯಪಾಲಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಭಾಲ್ಕಿ, ಕಮಲನಗರ್ ಹಾಗೂ ಔರಾದ್ ತಾಲ್ಲೂಕಿನ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಕಾರಂಜಾ ಜಲಾಶಯದಿಂದ 0.40 ಟಿಎಂಸಿ ಪ್ರಮಾಣದ ನೀರು ಹರಿಸಲಾಗುತ್ತಿದೆ. ಹಾಲಹಳ್ಳಿ ಬ್ಯಾರೇಜಿಗೆ ಅವಶ್ಯಕತೆಗನುಗುಣವಾಗಿ ಹಂತ ಹಂತವಾಗಿ ನೀರನ್ನು ಹರಿಸಲಾಗುತ್ತಿರುವುದರಿಂದ ನದಿಯ ಅಕ್ಕಪಕ್ಕದ ಸಾರ್ವಜನಿಕರು ನದಿಗೆ ಇಳಿಯುವುದು, ಬಟ್ಟೆ ಒಗೆಯುವುದು, ಈಜುವುದು, ದನಕರುಗಳಿಗೆ ನೀರು ಕುಡಿಸುವುದಾಗಲಿ ಮಾಡಬಾರದು ಎಂದು ಅವರು ತಿಳಿಸಿದ್ದಾರೆ.