ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ 17 ರೈತ ಸಂಪರ್ಕ ಕೆಂದ್ರ ಪ್ರಾರಂಭ : ಸಚಿವ ಚಲುವರಾಯಸ್ವಾಮಿ

Update: 2024-06-29 11:19 GMT

ಬೀದರ್ : ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಸ್ವಂತ ಕಟ್ಟಡ ಇಲ್ಲದ 17 ರೈತ ಸಂಪರ್ಕ ಕೇಂದ್ರಗಳನ್ನು 34 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ .

ಬೀದರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಲಬುರಗಿ ವಿಭಾಗದ ಕೃಷಿ ಮತ್ತು ಜಲಾನಯನ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ 14.50 ಕೋಟಿ ರೂಪಾಯಿ ವೆಚ್ಚದಲ್ಲಿ 58 ಗೋದಾಮುಗಳನ್ನು ನಿರ್ಮಿಸಲಾಗುವುದು. ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ 42 ಕೃಷಿ ಅಧಿಕಾರಿಗಳು, 231 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳನ್ನು ತುಂಬಲು ಕೆ.ಪಿ.ಎಸ್.ಸಿ ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಒಟ್ಟಾರೆ ರಾಜ್ಯಾದ್ಯಂತ ಕೃಷಿ ಇಲಾಖೆಯಲ್ಲಿ 979 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಅರಣ್ಯ ಸಚಿವರ ಮನವಿಯಂತೆ ಸೂಕ್ಷ್ಮ ನೀರಾವರಿ , ಹನಿ ನೀರಾವರಿ ಸೇರಿದಂತೆ ಬೀದರ್ ಜಿಲ್ಲೆಗೆ ಯಂತ್ರೋಪಕರಣಗಳ ವಿತರಣೆಗೆ ಹೆಚ್ಚುವರಿ ಅನುದಾನವನ್ನು ನೀಡಲಾಗುವುದು ಎಂದು ಚಲುವರಾಯಸ್ವಾಮಿ ಭರವಸೆ ನೀಡಿದರು.

ಕೇಂದ್ರದ ವಿಳಂಭ ಧೋರಣೆಯ ನಡುವೆಯೂ ರಾಜ್ಯದಲ್ಲಿ 4600 ಕೋಟಿ ರೂ ಬರ ಪರಿಹಾರ ನೀಡಲಾಗಿದೆ. 1700 ಕೋಟಿ ರೂ. ಮುಂಗಾರು ಹಂಗಾಮಿನ ವಿಮೆ ಪರಿಹಾರ ಇತ್ಯರ್ಥ ಮಾಡಲಾಗಿದೆ.  ರಾಜ್ಯದಲ್ಲಿ 1000ಕೋಟಿ ರೂ. ವೆಚ್ಚದಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಗಿದೆ.  ಜೊತೆಗೆ ರಾಜ್ಯ ಸರಕಾರ ಈ ಬಜೆಟ್ ನಲ್ಲಿಯೂ ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದೆ ಇದು ರೈತರ ಬಗ್ಗೆ ನಮಗೆ ಇರುವ ಬದ್ದತೆಗೆ ಸಾಕ್ಷಿ ಎಂದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News