ಯತ್ನಾಳ್ ಹೇಳಿಕೆಯಿಂದ ಮಹಿಳೆಯರಿಗೂ ಅಪಮಾನ: ಡಾ.ಅಕ್ಕ ಗಂಗಾಂಬಿಕೆ

Update: 2024-12-04 04:00 GMT

ಬೀದರ್: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಸವಣ್ಣನವರ ಬಗ್ಗೆ ಹಗುರವಾಗಿ ಮಾತನಾಡುವ ಮೂಲಕ ಅವರಿಗಷ್ಟೇ ಅಪಮಾನ ಮಾಡಿಲ್ಲ, ಮಹಿಳೆಯರಿಗೂ ಅಪಮಾನ ಮಾಡಿದ್ದಾರೆ ಎಂದು ಬಸವ ಸೇವಾ ಪ್ರತಿಷ್ಠಾನದ ಶ್ರೀ ಡಾ.ಅಕ್ಕ ಗಂಗಾಂಬಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶರಣ ಸಂಸ್ಕೃತಿ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, 'ಬಸವಣ್ಣರ ಚರಿತ್ರೆ, ಸಿದ್ಧಾಂತ ಯತ್ನಾಳ್ ಅವರಿಗೆ ಸರಿಯಾಗಿ ಗೊತ್ತಿಲ್ಲದಿರುವುದು ವಿಷಾದನೀಯ ಸಂಗತಿ. 12ನೇ ಶತಮಾನದಲ್ಲಿ ಬಸವಣ್ಣರ ನೇತೃತ್ವದಲ್ಲಿ ನಡೆದ ವಚನ ಚಳವಳಿಯಲ್ಲಿ ಮಹಿಳೆಯರೂ ಪಾಲ್ಗೊಂಡಿದ್ದರು. ಯತ್ನಾಳ್ ರ ಈ ಹೇಳಿಕೆ ಮೂರ್ಖತನದ ಪರಮಾವಧಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News