ಜು.6ರಂದು ಉಡುಪಿ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ರಜೆ: ಡಿಸಿ ಕೂರ್ಮಾರಾವ್
Update: 2023-07-05 16:07 GMT
ಉಡುಪಿ, ಜು.5: ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುವ ಜೊತೆಗೆ ಹವಾಮಾನ ಇಲಾಖೆ ನೀಡಿರುವ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮುಂಜಾಗೃತಾ ಕ್ರಮವಾಗಿ ಸತತ ಎರಡನೇ ದಿನವಾದ ಗುರುವಾರವೂ (ಜು.6) ಜಿಲ್ಲೆಯ ಎಲ್ಲಾ ಶಾಲಾ-ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಇದರಂತೆ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ. ಆದರೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐಟಿಐ ಸಂಸ್ಥೆಗಳಿಗೆ ರಜೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅದೇಶದಲ್ಲಿ ತಿಳಿಸಿದ್ದಾರೆ.