ಕನ್ವರ್ ಯಾತ್ರೆ | ಅಂಗಡಿ ಮಾಲೀಕರ ಹೆಸರುಗಳನ್ನು ಪ್ರದರ್ಶಿಸುವಂತೆ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Update: 2024-07-22 08:26 GMT

PHOTO : PTI

ಹೊಸದಿಲ್ಲಿ : ಕನ್ವರ್ ಯಾತ್ರೆಯ ಸಂದರ್ಭದಲ್ಲಿ ಅಂಗಡಿ ಮಾಲೀಕರು ತಮ್ಮ ಹೆಸರನ್ನು ಅಂಗಡಿಗಳ ಹೊರಗೆ ಪ್ರದರ್ಶಿಸುವಂತೆ ಉತ್ತರ ಪ್ರದೇಶ, ಉತ್ತರಾಖಂಡ ಸರಕಾರಗಳ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.

"ಸರಕಾರ ನೀಡಿದ ನಿರ್ದೇಶನವು ನಮ್ಮ ದೇಶದಲ್ಲಿ ಚಾಲ್ತಿಯಲ್ಲಿರುವ ಸಾಂವಿಧಾನಿಕ ಮತ್ತು ಕಾನೂನು ಮಾನದಂಡಗಳಿಗೆ ವಿರುದ್ಧವಾಗಿದೆ" ಎಂದು ಕನ್ವರ್ ಯಾತ್ರಾ ಮಾರ್ಗದಲ್ಲಿ ನಾಮಫಲಕಗಳ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದೆ.

ಕನ್ವರ್‌ ಯಾತ್ರೆಯ ಮಾರ್ಗದುದ್ದಕ್ಕೂ ಇರುವ ಎಲ್ಲ ಹೋಟೆಲ್‌ಗಳು ಹಾಗೂ ಆಹಾರ ಸ್ಟಾಲ್‌ಗಳ ಮಾಲಕರು ತಮ್ಮ ಹೆಸರುಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್‌ ಆದೇಶ ಹೊರಡಿಸಿದ್ದರು. ಆ ಬಳಿಕ ಉತ್ತರಾಖಂಡ ಸರಕಾರವು ಅದೇ ರೀತಿಯ ಆದೇಶವನ್ನು ಹೊರಡಿಸಿತ್ತು. 

ಅಸೋಷಿಯೇಷನ್‌ ಫಾರ್‌ ಪ್ರೊಟೆಕ್ಷನ್‌ ಆಫ್‌ ಸಿವಿಲ್‌ ರೈಟ್ಸ್‌ ASSOCIATION FOR PROTECTION OF CIVIL RIGHTS (APCR) ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಸಾವನ್ ಭಟ್ಟಿ ಅವರಿದ್ದ ಪೀಠವು, ಅಸಾಂವಿಧಾನಿಕ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತು. ಮಾಲೀಕರ ಹೆಸರುಗಳನ್ನು ಪ್ರದರ್ಶಿಸುವ ಬದಲು ಮಳಿಗೆಗಳಲ್ಲಿ ಮಾರಾಟ ಮಾಡುವ ಆಹಾರ ಪದಾರ್ಥಗಳ ಹೆಸರುಗಳನ್ನು ಪ್ರದರ್ಶಿಸಬೇಕು ಎಂದು ಸೂಚಿಸಿತು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News