ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣ: ಮೂವರು ವಿದ್ಯಾರ್ಥಿನಿಯರು ನ್ಯಾಯಾಲಯಕ್ಕೆ ಹಾಜರು: ಷರತ್ತುಬದ್ಧ ಜಾಮೀನು ಮಂಜೂರು

Update: 2023-07-28 08:48 GMT

ಉಡುಪಿ: ನೇತ್ರಾ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿ ನ್ಯಾಯಾಲಯವು ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ

ಆರೋಪಿ ವಿದ್ಯಾರ್ಥಿನಿಯರು ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಲಂ: 509,204,175,34 ಐ,ಪಿ,ಸಿ,ಮತ್ತು 66(ಇ) ಐಟಿ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಮೂವರು ವಿದ್ಯಾರ್ಥಿನಿಯರು ಇಂದು ಉಡುಪಿಯ ಪ್ರಥಮ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಮೂವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ. ತನಿಖಾಧಿಕಾರಿಗಳಿಗೆ ತನಿಖೆಗೆ ಸಹಕರಿಸುವುದು, ವಿಚಾರಣೆ ದಿನ ನ್ಯಾಯಾಲಯಕ್ಕೆ ಕಡ್ಡಾಯವಾಗಿ ಹಾಜರಾಗುವುದು, ಸಾಕ್ಷಿ ಗಳಿಗೆ ಯಾವುದೇ ಬೆದರಿಕೆಯೊಡ್ಡದಿರುವುದು ಮತ್ತು ತಲಾ 20,000ರೂ. ಮೊತ್ತ ಬಾಂಡ್ ನ್ಯಾಯಾಲಯಕ್ಕೆ ಸಲ್ಲಿಸುವುದು ಸೇರಿದಂತೆ ಹಲವು ಶರತುಗಳನ್ನು ನ್ಯಾಯಾಲಯ ವಿಧಿಸಿದೆ

ಆರೋಪಿಗಳ ಪರ ಉಡುಪಿಯ ನ್ಯಾಯವಾದಿ ಅಸದುಲ್ಲಾ ಕಟಪಾಡಿ ವಾದಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News